ಚುನಾವಣಾ ಸರ್ಧೆಯಲ್ಲಿ ಲಿಮ್ಕಾ ಬುಕ್ ದಾಖಲೆ ಬರೆದ ವ್ಯಕ್ತಿ ಈಗ ಸಿಎಂ ಬೊಮ್ಮಾಯಿ ವಿರುದ್ಧ ಅಭ್ಯರ್ಥಿ…! ಇವರು ಎಷ್ಟು ಸಲ ಸ್ಪರ್ಧಿಸಿದ್ದಾರೆ ಗೊತ್ತೆ..?

posted in: ರಾಜ್ಯ | 0

ಹಾವೇರಿ : ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿರುದ್ಧ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಕೆ. ಪದ್ಮರಾಜನ್ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ.
ಗುರುವಾರ ನಾಮಪತ್ರ ಸಲ್ಲಿಸುವ ಮೂಲಕ ಕೆ . ಪದ್ಮರಾಜನ್ ಅವರು ಎದುರಿಸುತ್ತಿರುವ 234 ನೇ ಚುನಾವಣೆ ಇದಾಗಿದೆ . ಅವರು ಇಷ್ಟೊಂದು ಸಲ ಚುನಾವಣೆಗೆ ಸ್ಪರ್ಧಿಸಿ ದಾಖಲೆ ಮಾಡಿರುವುದು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. ಕೆ .ಪದ್ಮರಾಜನ್ ತಮಿಳುನಾಡಿನ ಸೇಲಂನ ಮೆಟ್ಟೂರು ಮೂಲದವರು. ಎಂಬಿಎ ಪದವೀಧರರಾಗಿದ್ದಾರೆ. ಇವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. ಕೆ.ಪದ್ಮರಾಜನ್ ಅವರು ಮೆಟ್ಟೂರಿನಲ್ಲಿ ಸ್ವಂತ ಉದ್ಯೋಗ ಮಾಡಿಕೊಂಡಿದ್ದಾರೆ. ನಾನು ಹೋಮಿಯೋಪತಿ ವೈದ್ಯ ಎಂದು ಹೇಳಿಕೊಂಡಿದ್ದಾರೆ.
ಇವರು 1988ರಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರು ಬಹುತೇಕ ಎಲ್ಲಾ ಸಾರ್ವತ್ರಿಕ ಚುನಾವಣೆಗಳಲ್ಲಿ ವಿಧಾನಸಭೆ, ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ಕರುಣಾನಿಧಿ ಮತ್ತು ಜೆ ಜಯಲಲಿತಾ ಅವರ ವಿರುದ್ಧವೂ ಸ್ಪರ್ಧಿಸಿದ್ದಾರೆ. ಪದ್ಮರಾಜನ್ ಅವರು ರಾಹುಲ್ ಗಾಂಧಿ ವಿರುದ್ಧ 2019 ರ ಲೋಕಸಭೆ ಚುನಾವಣೆಯಲ್ಲಿ ವಯನಾಡಿನಲ್ಲಿ ಸ್ಪರ್ಧಿಸಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement