ದೇವಸ್ಥಾನದಲ್ಲಿ ಕಾಂಗ್ರೆಸ್ ನಾಯಕ ಡಾ.ಪರಮೇಶ್ವರ ಪಾದ ಮುಟ್ಟಿ ನಮಸ್ಕರಿಸಿದ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ | ವೀಕ್ಷಿಸಿ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ತುಮಕೂರಿನ ದೇವಸ್ಥಾನದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಡಾ. ಜಿ ಪರಮೇಶ್ವರ ಅವರ ಆಶೀರ್ವಾದ ಪಡೆದರು.
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಅವರು ತಮ್ಮ ತಂದೆಯ ಭದ್ರಕೋಟೆಯಾದ ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. 49 ವರ್ಷದ ವಿಜಯೇಂದ್ರ ಅವರು ಶಿಕಾರಿಪುರದಿಂದ ನಾಮಪತ್ರ ಸಲ್ಲಿಸುವ ಮೂರು ದಿನಗಳ ಮೊದಲು ಯಡಿಯೂರಿನ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮಾಜಿ ಉಪಮುಖ್ಯಮಂತ್ರಿ ಮತ್ತು ಹಾಗೂ ಕಾಂಗ್ರೆಸ್‌ ನಾಯಕ ಪರಮೇಶ್ವರ ಅವರು ಸಹ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇಬ್ಬರು ಗಣ್ಯರು ದೇವಸ್ಥಾನದ ಮುಂಭಾಗದಲ್ಲಿ ಪರಸ್ಪರ ಎದುರಾದಾಗ ಉಭಯ ಕುಶಲೋಪರಿ ಮಾತನಾಡಿದರು. ನಂತರ ಯಡಿಯೂರು ಸಿದ್ದಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಈ ವೇಳೆ ಅಲ್ಲಿದ್ದ ಕೆಲವರು ಪರಮೇಶ್ವರ ಅವರಿಗೆ ಸನ್ಮಾನ ಮಾಡಲು ಶಾಲನ್ನು ತಂದಿದ್ದರು. ಅದೇ ಶಾಲನ್ನು ಪಡೆದ ಪರಮೇಶ್ವರ ಅವರು ವಿಜಯೇಂದ್ರ ಅವರಿಗೆ ಹೊದಿಸಿದರು. ಆಗ ವಿಜಯೇಂದ್ರ ಅವರು ಡಾ.ಪರಮೇಶ್ವರ ಅವರ ಪಾದಕ್ಕೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡರು. ಅವರು ವಿಜಯೇಂದ್ರ ಅವರನ್ನು ಆಶೀರ್ವದಿಸುತ್ತಿರುವುದು ಕಂಡುಬಂದಿದೆ.

ಹಲವು ಊಹಾಪೋಹಗಳು ಮತ್ತು ನಾಟಕಗಳ ನಂತರ ಬಿಜೆಪಿ ಶಿಕಾರಿಪುರದಿಂದ ವಿಜಯೇಂದ್ರ ಅವರನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವರುಣಾದಿಂದ ಸ್ಪರ್ಧಿಸಬೇಕೆಂದು ಹಲವು ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದರು ಆದರೆ ಕೇಂದ್ರ ನಾಯಕತ್ವವು ಅದನ್ನು ವಿರೋಧಿಸಿತು. ಯಡಿಯೂರಪ್ಪ ಕೂಡ ತಮ್ಮ ಮಗ ಸಿದ್ದರಾಮಯ್ಯ ಅವರ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿ ಹಾಕಿದ್ದರು.
ಯಡಿಯೂರಪ್ಪ 1983 ರಿಂದ ಏಳು ಬಾರಿ ಗೆದ್ದಿರುವುದರಿಂದ ಶಿಕಾರಿಪುರವನ್ನು ಬಿಜೆಪಿಗೆ ಸುರಕ್ಷಿತ ಕ್ಷೇತ್ರವೆಂದು ಪರಿಗಣಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement