ಅಬಕಾರಿ ನೀತಿ ಹಗರಣ; ವಿಚಾರಣೆಗೆ ಹಾಜರಾಗಲು ಅರವಿಂದ ಕೇಜ್ರಿವಾಲಗೆ ಸಮನ್ಸ್ ನೀಡಿದ ಸಿಬಿಐ

ನವದೆಹಲಿ: ಈಗ ರದ್ದಾದ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್ ನೀಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ಸಿಸೋಡಿಯಾ ಅವರು ಏಪ್ರಿಲ್ 17ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಆರೋಪದ ಪ್ರಕರಣದಲ್ಲಿ ಅವರು ಏಪ್ರಿಲ್ 27ರಂದು ವಿಚಾರಣೆಗೆ ಹಾಜರಾಗಬೇಕೆಂದು ಗೋವಾ ಪೊಲೀಸರು ಕೂಡ ಅರವಿಂದ ಕೇಜ್ರಿವಾಲ್‌ ಅವರಿಗೆ ಸಮನ್ಸ್ ನೀಡಿದ್ದಾರೆ.
ಸಿಬಿಐಯು ರಾಜ್ಯದ ಮುಖ್ಯಸ್ಥರಿಗೆ ಸಮನ್ಸ್‌ ಜಾರಿ ಮಾಡುವುದು ಇದೇ ಮೊದಲು. ಅರವಿಂದ್‌ ಕೇಜ್ರಿವಾಲ್‌ ಅವರು ಅಬಕಾರಿ ನೀತಿ ಹಗರಣದ ಮಾಸ್ಟರ್‌ ಮೈಂಡ್‌ ಎಂದು ಬಿಜೆಪಿ ಹೇಳಿಕೊಳ್ಳುತ್ತ ಬಂದಿದೆ.
ದೇಶದ ಪ್ರಗತಿಯನ್ನು ಬಯಸದ ಹಲವಾರು ದೇಶ ವಿರೋಧಿ ಶಕ್ತಿಗಳು ದೇಶದಲ್ಲಿವೆ. ಈ ಎಲ್ಲಾ ಜನರು ಮನೀಶ್ ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದವರು ದೇಶದ ಶತ್ರುಗಳು” ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದರು.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement