ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಮುಳುಗಿ ಸಾವು

ಬೆಳಗಾವಿ: ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.
ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ರಜೆ ಹಿನ್ನೆಲೆಯಲ್ಲಿ ಘಟಪ್ರಭಾ ಪುರ ಸಭೆ ವ್ಯಾಪ್ತಿಯ ಮನಿಷ್ ಬಾರ್’ನ ಆರು ಜನ ಕೆಲಸದ ಹುಡುಗರು ಧೂಪದಾಳ ಡ್ಯಾಂಗೆ ಈಜಲು ಹೋಗಿದ್ದರು. ಓರ್ವ ಅಪಾಯದಿಂದ ಪಾರಾಗಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ನಾಲ್ವರು ಮೃತರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದವರು ಎಂದು ಹೇಳಲಾಗಿದೆ.
4 ಮಂದಿ ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್ ಠಾಣಾ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಮೃತರನ್ನು ಮೃತರನ್ನು ಸಂತೋಷ ಬಾಬು (16), ಅಜಯ (17), ಕೃಷ್ಣ (16) ಹಾಗೂ ಆನಂದ (16) ಎಂದು ಗುರುತಿಸಲಾಗಿದೆ. ರಾಮಚಂದ್ರ (17) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆತನನ್ನು ಘಟಪ್ರಭಾ ಕೆಎಚ್ ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement