ಬಿಜೆಪಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್‌ ಬೈ: ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ ವಿಧಾನ ಪರಿಷತ್‌ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಸ್ಥಾನ, ಪಕ್ಷದ ಕೋರ್ ಕಮಿಟಿ ಸದಸ್ಯ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದಾರೆ. ನಂತರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಅಥಣಿ ಟಿಕೆಟ್ ಗೆ ಕಣ್ಣಿಟ್ಟಿದ್ದ ಸವದಿಗೆ ಕೊನೆಗೂ ಟಿಕೆಟ್ ಸಿಕ್ಕಿರಲಿಲ್ಲ. ಬದಲಾಗಿ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಸವದಿ ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆ ಆಗಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಲಕ್ಷ್ಮಣ ಸವದಿ, ಕಾಂಗ್ರೆಸ್ ಪಕ್ಷದ ನಾಯಕರ ಮುಂದೆ ಎರಡು ಷರತ್ತುಗಳನ್ನು ಇಟ್ಟಿರುವುದಾಗಿ ಹೇಳಿದರು. ಮೊದಲನೆಯದಾಗಿ ಅವರಿಗೆ ಅಥಣಿ ಕ್ಷೇತ್ರದ ಟಿಕೆಟ್ ನೀಡಬೇಕು ಮತ್ತು ಎರಡನೆಯದಾಗಿ ಸರ್ಕಾರ ರಚನೆಯಾದ ಮೇಲೆ ಅಥಣಿ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ನೀರಾವರಿ ಯೋಜನೆಗಳನ್ನು ಪೂರ್ತಿಗೊಳಿಸಬೇಕು ಎಂಬ ಎರಡು ಷರತ್ತುಗಳನ್ನು ವಿಧಿಸಿದ್ದಾರೆ ಎಂದು ವರದಿಯಾಗಿದೆ.
ಸವದಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಹೋಗುತ್ತಿರುವುದು ದುಃಖ ತರಿಸಿದೆ. ಲಕ್ಷ್ಮಣ ಸವದಿ ಜೊತೆ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಲಕ್ಷ್ಮಣ ಸವದಿಗೆ ಕಾಂಗ್ರೆಸ್‌ನಲ್ಲಿ ಭವಿಷ್ಯ ಕಾಣಿಸಿದೆ, ಹೋಗಿದ್ದಾರೆ. ಕಾಂಗ್ರೆಸ್‌ಗೆ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಇಲ್ಲ. ಹೀಗಾಗಿ ಬೇರೆ ಪಕ್ಷಗಳಿಂದ ಬಂದವರನ್ನು ಸೇರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement