ಸಾರಿಗೆ ಬಸ್- ಕಾರು ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಾವು

ಮಡಿಕೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಮಾರುತಿ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಜನರು ಮೃತಪಟ್ಟ ಘಟನೆ ಗಡಿ ಗ್ರಾಮವಾದ ಸಂಪಾಜೆಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ನಡೆದಿದ್ದು, ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್‌ ಡಿಸೈರ್‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಮಡಿಕೇರಿ ಕಡೆಯಿಂದ ಬಂದ ಕಾರು ಸಂಪಾಜೆ ಪೆಟ್ರೋಲ್ ಪಂಪ್ ಪೆಟ್ರೋಲ್ ತುಂಬಿಸಿಕೊಂಡು ರಸ್ತೆಗೆ ಇಳಿಯುತ್ತಿದ್ದಂತೆ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಂಭಿರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲು ವಾಹನದಲ್ಲಿ ತೆರಳುತ್ತಿದ್ದಾಗ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದ್ದಾರೆ. ಮಳವಳ್ಳಿ ತಾಲೂಕಿನ ಭೀಮನಹಳ್ಳಿಯವರು ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು ಎಂದು ಹೇಳಲಾಗಿದೆ. ಓರ್ವ ವ್ಯಕ್ತಿ ಮತ್ತು ಮಗು ಗಂಭೀರ ಸ್ಥಿತಿಯಲ್ಲಿ ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement