ಸುಳ್ಯ: ರಾಜಕೀಯ ನಿವೃತ್ತಿ ಹಿಂಪಡೆದ ಶಾಸಕ ಎಸ್.ಅಂಗಾರ ; ಬಿಜೆಪಿ ಅಭ್ಯರ್ಥಿ ಪರ ಪ್ರಚಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ನಂತರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಸುಳ್ಯ ಶಾಸಕ ಎಸ್. ಅಂಗಾರ ಅವರು ಈಗ ತಮ್ಮ ನಿರ್ಧಾರ ಬದಲಾಯಿಸಿದ್ದಾರೆ.
ಸಚಿವ ಎಸ್​. ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಣೆಯನ್ನು ಹಿಂಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ತಮ್ಮ ನಿರ್ಧಾರ ಹಿಂಪಡೆದಿದ್ದಾರೆ.
ತಮಗೆ ಬಿಜೆಪಿ ಟಿಕೆಟ್​​ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜಿಕೀಯ ನಿವೃತ್ತಿ ಘೋಷಿಸಿದ್ದರು. ಬಿಜೆಪಿಯು ಭಾಗೀರಥಿ ಮುರುಳ್ಯ ಎಂಬವರಿಗೆ ಟಿಕೆಟ್‌ ನೀಡಿದ್ದು, ಹಿರಿಯ ನಾಯಕರ ಮಾತುಕತೆ ನಂತರ ಅಂಗಾರ ಅವರು ಭಾಗೀರಥಿ ಮುರುಳ್ಯ ಅವರ ಪರವಾಗಿ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.
ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೆ. ಈಗ ನಾನು ಮೊದಲಿನಂತೆ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ಗುರಿ. ಹೀಗಾಗಿ ವೈಯಕ್ತಿಕವಾಗಿ ನೀಡಿದ ಆ ಹೇಳಿಕೆ ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದು ಅಂಗಾರ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement