ಕರ್ನಾಟಕ ವಿಧಾನಸಭೆ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಬೊಮ್ಮಾಯಿ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಸಚಿವ ಸಿ.ಸಿ ಪಾಟೀಲ, ಶಿವಕುಮಾರ ಉದಾಸಿ ಮೊದಲಾದವರು ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು. ನಂತರ ಅಮರಗೋಳದಲ್ಲಿನ ತಂದೆ ತಾಯಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಶಿಗ್ಗಾಂವಿಗೆ ಆಗಮಿಸಿದ್ದರು. ಶಿಗ್ಗಾಂವಿ ಪುರಸಭೆ ಬಳಿಯ ಚೆನ್ನಮ್ಮ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ನಂತರ ಗ್ರಾಮ ದೇವತೆ ದರ್ಶನ ಪಡೆದ ಬಳಿಕ ನಾಮಪತ್ರ ಸಲ್ಲಿಸಿದರು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

ನಿಮ್ಮ ಕಾಮೆಂಟ್ ಬರೆಯಿರಿ

advertisement