ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನೀಡುವಂತೆ ಒತ್ತಡ : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ 16 ಸದಸ್ಯರ ರಾಜೀನಾಮೆ ಪತ್ರ

ಹುಬ್ಬಳ್ಳಿ : ಹುಬ್ಬಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಟಿಕೆಟ್ ಘೋಷಣೆ ವಿಳಂಬ ಖಂಡಿಸಿ ಮಹಾನಗರ ಪಾಲಿಕೆಯ ಬಿಜೆಪಿ ಕೆಲ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ 212 ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಇನ್ನೂ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿದೆ. ಹುಬ್ಬಳಿ ಧಾರವಾಡ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಘೋಷಣೆಯನ್ನು ಬೇಕಂತಲೇ ಬಿಜೆಪಿ ವರಿಷ್ಠರು ತಡೆ ಹಿಡಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಚುನಾಯಿತ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
“ಹುಬ್ಬಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವಲ್ಲಿ ತಾವು ವಿಳಂಬ ನೀತಿ ಅನುಸರಿಸುತ್ತಿರುವುದು ಅತೀ ದುಃಖದ ಸಂಗತಿ” ಎಂದು ಪತ್ರದಲ್ಲಿ ಬರೆಯಲಾಗಿದೆ.
ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದು ಅವಶ್ಯಕ. ಈ ವಿಳಂಬ ನೀತಿ ಖಂಡಿಸಿ ಒಟ್ಟು ಬಿಜೆಪಿ ಮಹಾನಗರ ಪಾಲಿಕೆಯ 16 ಬಿಜೆಪಿ ಸದಸ್ಯರು, ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement