ಕಾರು ಅಪಘಾತ: ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರಗೆ ಗಾಯ

ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ ಚಿಂಚನಸೂರ ಅವರಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಡರಾತ್ರಿ ಎರಡು ಗಂಟೆ ಸುಮಾರಿಗೆ ಬಾಬಾರಾವ್‌ ಚಿಂಚನಸೂರ ಅವರನ್ನು ಯುನೈಟೆಡ್‌ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ. ಯಾವುದೇ ಅಪಾಯ ಇಲ್ಲ ಎಂದು ಎಂಬ ಮಾಹಿತಿ ಲಭ್ಯವಾಗಿದೆ.
ಚುನಾವಣಾ ಪ್ರಚಾರ ಮುಗಿಸಿ ಯಾದಗಿರಿಯಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಆಕಾಶವಾಣಿ ಕೇಂದ್ರ ಬಳಿ ಅಪಘಾತ ಸಂಭವಿಸಿದೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ್‌ ಚಿಂಚನಸೂರ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ. ಅವರ ಜೊತೆಯಲ್ಲಿದ್ದ ಗನ್ ಮ್ಯಾನ್ ಮತ್ತು ಚಾಲಕನಿಗೆ ಗಾಯಗಳಾಗಿಲ್ಲ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲ ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಬಾಬುರಾವ್‌ ಚಿಂಚನಸೂರ ಅವರಿಗೆ ಗುರುಮಠಕಲ್‌ನಿಂದ ಕಾಂಗ್ರೆಸ್‌ ಟಿಕೆಟ್‌ ಕೂಡ ನೀಡಲಾಗಿದ್ದು, ಪ್ರಚಾರ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement