ನಿವೇದಿತ ಆಳ್ವಾಗೆ ಕುಮಟಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ರಾಜೀನಾಮೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಮುಖಂಡ ಹಾಗೂ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ರಾಜೀನಾಮೆ ನೀಡಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಇಂದು, ಶನಿವಾರ ಕಾಂಗ್ರೆಸ್‌ ತನ್ನ ಮೂರನೇ ಅಭ್ಯರ್ಥಿಗಳ ಬಿಡುಗಡೆ ಮಾಡಿದ್ದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ನಿವೇದಿತ ಆಳ್ವ ಅವರಿಗೆ ಟಿಕೆಟ್‌ ಘೋಷಣೆ ಮಾಡಿದ ನಂತರ ಶಿವಾನಂದ ಹೆಗಡೆ ಅವರ ರಾಜೀನಾಮೆ ಬಂದಿದೆ.
ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಕ ಮಾಡಿದ ನಂತರ ಕಿಸಾನ್ ಘಟಕವನ್ನು ಉತ್ತಮವಾಗಿ ನಡೆಸಿದ್ದಲ್ಲದೇ ತಾವು ಹೇಳಿದಂತೆ ಎಲ್ಲಾ ಕಾರ್ಯಗಳನ್ನು ಸಮರ್ಥವಾಗಿ ಮಾಡಿದ್ದೇನೆ. ಪಕ್ಷದ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದೇನೆ ಎಂಬ ತೃಪ್ತಿ ನನಗಿದೆ. ಈ ಅವಧಿಯಲ್ಲಿ ತಾವು ನೀಡಿದ ಸಹಕಾರಕ್ಕೆ ಕೃತಜ್ಞನಾಗಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಆದರೆ ಇತ್ತೀಚಿನ ಬೆಳವಣಿಗೆಗಳು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲು ಬಿ-ಫಾರ್ಮಗಾಗಿ ನನ್ನನ್ನೂ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಪಕ್ಷ ಸಂಘಟನೆಗಾಗಿ ದುಡಿದವರು, ಪಕ್ಷದ ಕಾರ್ಯಕ್ರಮಗಳಿಗೆ ಅಪಾರ ಶ್ರಮ ವಹಿಸಿದವರು ಹಾಗೂ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಸ್ಥಳೀಯರನ್ನು ನಿರ್ಲಕ್ಷಿಸಿ ಹೊರಗಿನವರಾದ ನಿವೇದಿತ ಆಳ್ವಾ ಅವರಿಗೆ ಕಾಂಗ್ರೆಸ್ ಟಿಕೆಟ್‌ (ಬಿ-ಫಾರ್ಮ್) ನೀಡಿರುವುದು ನನ್ನ ಮನಸ್ಸಿಗೆ ತುಂಬಾ ಬೇಸರವಾಗಿದೆ. ಇದನ್ನು ಅನೇಕ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಉತ್ತರ ಕನ್ನಡ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಶಿವಾನಂದ ಹೆಗಡೆ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement