ಸಿಎಂ ಬೊಮ್ಮಾಯಿ ಆಸ್ತಿ ವಿವರ: ಸ್ವಂತ ವಾಹನವಿಲ್ಲ, 5.98 ಕೋಟಿ ರೂ. ಚರಾಸ್ತಿ, 22.95 ಕೋಟಿ ರೂ. ಸ್ಥಿರಾಸ್ತಿ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( ಅವರ ಇಂದು(ಏಪ್ರಿಲ್ 15) ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ನಾಮಪತ್ರದಲ್ಲಿ ತಮ್ಮ ವೈಯಕ್ತಿ ಮತ್ತು ಕಟುಂಬದ ಆಸ್ತಿ ವಿವರ ನೀಡಿದ್ದು, 5.98 ಕೋಟಿ ರೂ. ಚರಾಸ್ತಿ ಹಾಗೂ 22.95 ಕೋಟಿ ರೂ. ಸ್ಥಿರಾಸ್ತಿ ಘೋಷಿಸಿಕೊಂಡಿದ್ದಾರೆ.
ತಮ್ಮ ಬಳಿ ಯಾವುದೇ ವಾಹನಗಳಿಲ್ಲ ಎಂದು ಬೊಮ್ಮಾಯಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ತಮ್ಮ ಪತ್ನಿ ಚೆನ್ನಮ್ಮ ಬಳಿ ಯಾವುದೇ ಸ್ಥಿರ ಆಸ್ತಿ ಇಲ್ಲ ಅವರು 1.14 ಕೋಟಿ ರೂ. ಚರಾಸ್ತಿ ಇರುವುದಾಗಿ ಮಾಹಿತಿ ನೀಡಿದ್ದಾರೆ. ತಮ್ಮ ಹಿಂದೂ ಅವಿಭಜಿತ ಕುಟುಂಬದಲ್ಲಿ 1.57 ಕೋಟಿ ರೂ. ಚರಾಸ್ತಿ, 19.20 ಕೋಟಿ ರೂ. ಸ್ಥಿರಾಸ್ತಿ ಇದೆ. ಪುತ್ರಿ ಹೆಸರಲ್ಲಿ 1.28 ಕೋಟಿ ರೂ. ಚರಾಸ್ತಿ ಇರುವುದಾಗಿ ಮಾಹಿತಿ ನೀಡಿದ್ದಾರೆ.
ಬೊಮ್ಮಾಯಿ ಹೆಸರಿನಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ 40 ಲಕ್ಷ ರೂ.ಗಳಿಗೂ ಹೆಚ್ಚು ಠೇವಣಿ ಇದ್ದರೆ, ಪತ್ನಿ ಬಳಿ 27.6 ಲಕ್ಷ ರೂ. ಠೇವಣಿ ಇದೆ. ಅಲ್ಲದೆ, ವಿವಿಧ ಕಂಪನಿಗಳಲ್ಲಿ ಅವರು 3.23 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. ಅವರ ಪತ್ನಿ ಸುಮಾರು 7 ಲಕ್ಷ ರೂ. ಹೂಡಿಕೆ ಹೊಂದಿದ್ದಾರೆ. ಪುತ್ರಿ ಹೆಸರಲ್ಲೂ 23 ಲಕ್ಷ ರೂ.ಗಳಿಗೂ ಮಿಕ್ಕಿ ಹೂಡಿಕೆ ಇದೆ.
ಪುತ್ರ ಭರತ್‌ ಬೊಮ್ಮಾಯಿ ಹಾಗೂ ಸುಗುಣ ಅವರಿಗೆ ಬೊಮ್ಮಾಯಿ ಅವರು ಕ್ರಮವಾಗಿ 14.74 ಲಕ್ಷ ರೂ. ಹಾಗೂ 2 ಲಕ್ಷ ರೂ. ಸಾಲ ನೀಡಿದ್ದಾರೆ. ಅವಿಭಕ್ತ ಕುಟುಂಬದಿಂದ ಬಸವರಾಜ ಬೊಮ್ಮಾಯಿ 1.42 ಕೋಟಿ ರೂ. ಸಾಲವಾಗಿ ಪಡೆದಿದ್ದಾರೆ.
ಬೊಮ್ಮಾಯಿ ಬಳಿ 1.50 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳಿದ್ದರೆ, ಪತ್ನಿ ಬಳಿ 78.83 ಲಕ್ಷ ರೂ., ಪುತ್ರಿ ಬಳಿ 53.84 ಲಕ್ಷ ರೂ., ಕುಟುಂಬದ ಬಳಿ 13.78 ಲಕ್ಷ ರು. ಮೌಲ್ಯದ ಚಿನ್ನಾಭರಣಗಳಿವೆ.
ಬಸವರಾಜ ಬೊಮ್ಮಾಯಿ ಅವರಿಗೆ ಒಂದು ಕೃಷಿ ಜಮೀನಿದ್ದು, ಅವರ ಕುಟುಂಬದ ಬಳಿ ಒಂದು ಜಮೀನಿದೆ. ಬೆಂಗಳೂರಿನ ಯಲಹಂಕ ಹಾಗೂ ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಅವರಿಗೆ ತಲಾ ಒಂದು ಕೃಷಿಯೇತರ ಭೂಮಿಯೂ ಇದೆ. ಕುಟುಂಬದ ಹೆಸರಲ್ಲಿ ಹುಬ್ಬಳ್ಳಿಯ ನಾಲ್ಕು ಕೃಷಿಯೇತರ ಭೂಮಿ ಇದೆ. ದೊಡ್ಡಬಳ್ಳಾಪುರ  ಮತ್ತು ಧಾರವಾಡದ ಇಂಡಸ್ಟ್ರಿಯಲ್‌ ಪ್ರದೇಶದಲ್ಲಿ ಬೊಮ್ಮಾಯಿ ಅವರು ವಾಣಿಜ್ಯ ಕಟ್ಟಡಗಳನ್ನು ಹೊಂದಿದ್ದಾರೆ. ಶಿಗ್ಗಾಂವಿಯಲ್ಲಿ ಅವರಿಗೆ ಮನೆಯಿದ್ದರೆ, ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ಫ್ಲ್ಯಾಟ್‌ ಇದೆ. ಕುಟುಂಬದ ಹೆಸರಲ್ಲಿ ಹುಬ್ಬಳ್ಳಿ ಹಾಗೂ ಬೆಂಗಳೂರಿನ ಆರ್‌ಟಿ ನಗರದಲ್ಲಿ ಮನೆಗಳಿವೆ.
ಅವರಿಗೆ ಬಹಳಷ್ಟು ಸಾಲಗಲೂ ಇವೆ. ಐಸಿಐಸಿಐ ಬ್ಯಾಂಕ್‌ನಲ್ಲಿ 47.35 ಲಕ್ಷ ರೂ., ಎಸ್‌ಬಿಐನಲ್ಲಿ 37.47 ಲಕ್ಷ ರೂ. ಗೃಹ ಸಾಲವಿದೆ. 79 ಸಾವಿರದ ಇನ್ನೊಂದು ಗೃಹ ಸಾಲವೂ ಎಸ್‌ಬಿಐನಲ್ಲಿದೆ. ಇದಲ್ಲದೆ ಕುಟುಂಬದಿಂದ 1.42 ಕೋಟಿ ರೂ. ಸಾಲ ಪಡೆದುಕೊಂಡಿದ್ದು, 9 ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದಲೂ ಅಪಾರ ಪ್ರಮಾಣದ ಸಾಲ ಪಡೆದುಕೊಂಡಿದ್ದಾರೆ. ಹೀಗೆ ಒಟ್ಟು 5.79 ಕೋಟಿ ರೂ. ಸಾಲ ಹೊಂದಿದ್ದಾರೆ. ಇನ್ನು 2021-22ರಲ್ಲಿ 41.09 ಲಕ್ಷ ರೂ. ಆದಾಯ ಗಳಿಸಿರುವುದಾಗಿ ಬೊಮ್ಮಾಯಿ ಉಲ್ಲೇಖಿಸಿದ್ದ, ಪತ್ನಿ ಆದಾಯ 2.69 ಲಕ್ಷ ರೂ. ಎಂದು ಘೋಷಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement