ಬಾಗಲಕೋಟೆ: ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಬಾಗಲಕೋಟೆ : ಬಾಗಲಕೋಟೆ ಹೊರವಲಯದ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದ ನಂತರ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ವಿಜಯಪುರದಲ್ಲಿ ನಡೆದ ಜವಳದ ಕಾರ್ಯಕ್ರಮ ಮುಗಿಸಿ ಭಾನುವಾರ ತಡ ರಾತ್ರಿ ಊರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ಕುಷ್ಟಗಿ ತಾಲೂಕಿನ ತಾವರಗೇರಿಯ ಶಾಮಿದಸಾಬ್ ಕಿಡದೂರನಾಯಕ್ (65), ಮೌಲಾಸಾಬ್ ಕಿಡದೂರನಾಯಕ್ (60) ಹಾಗೂ ಇಮಾಮಬಿ ಕಿಡದೂರನಾಯಕ್ (60) ಎಂದು ಗುರುತಿಸಲಾಗಿದೆ.
ಅಪಘಾತಕೀಡಾದ ಮಿನಿ ಲಾರಿಯಲ್ಲಿ 17 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ; ಅಂಧ ದಂಪತಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement