ಬಿಜೆಪಿ ವರಿಷ್ಠರು ಸೂಚಿಸಿದರೆ ಮಂಡ್ಯದಲ್ಲಿ ಸ್ಪರ್ಧಿಸುವೆ : ಸುಮಲತಾ ಅಂಬರೀಶ

posted in: ರಾಜ್ಯ | 0

ಮಂಡ್ಯ: ಬಿಜೆಪಿಯ ಹೈಕಮಾಂಡ್‌ ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ವದಂತಿ ಇದೆ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ. ಒಂದೊಮ್ಮೆ ಪಕ್ಷ ಸೂಚನೆ ನೀಡಿದರೆ ನಾನು ಸ್ಪರ್ಧೆ ಮಾಡುವೆ. ಆದರೆ ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮದ್ದೂರಿನಲ್ಲಿ ದಿ. ಅಂಬರೀಶ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಿಜೆಪಿಗೆ ಪ್ಲಸ್​ ಆಗಲಿದೆ. ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆ ಮೂಲಕ ರಾಜ್ಯ ರಾಜಕಾರಣಕ್ಕೆ ಬರಲು ಉತ್ಸುಕರಾಗಿರುವ ಅವರು ಮಂಡ್ಯವನ್ನೇ ತಮ್ಮ ಸ್ಪರ್ಧಾ ವೇದಿಕೆಯನ್ನಾಗಿ ಮಾಡಿಸಕೊಳ್ಳಲು ಅವರು ಚಿಂತನೆ ನಡೆಸಿದ್ದಾರೆ ಎಂಬುದು ಇದರಿಂದ ಗೋಚರವಾಗುತ್ತಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement