ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲ ತಾಪದಿಂದ 11 ಮಂದಿ ಸಾವು

ಮುಂಬೈ: ಭಾನುವಾರ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಕಾರ್ಯಕ್ರಮದಲ್ಲಿ ಬಯಲಿನಲ್ಲಿ ಕುಳಿತಿದ್ದ 11 ಮಂದಿ ಬಿಸಿಲ ತಾಪದಿಂದ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಸುಮಾರು 50 ಜನರು ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದಾಖಲಾಗಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ,
ಮಹಾರಾಷ್ಟ್ರ ಸರ್ಕಾರವು ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ನವಿ ಮುಂಬೈನಲ್ಲಿ ಕಾರ್ಯಕ್ರಮ ನಡೆದಿದ್ದು, ದಿನದ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಏಕನಾಥ ಶಿಂಧೆ ಮತ್ತು ದೇವೆಂದ್ರ ಫಡ್ನವಿಸ್ ಸಹ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.
ನವಿ ಮುಂಬೈನ ಬೃಹತ್ ಮೈದಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅನುಯಾಯಿಗಳು ಆಗಮಿಸಿದ್ದರು. ಬೆಳಗ್ಗೆ 11:30ಕ್ಕೆ ಆರಂಭವಾದ ಪ್ರಶಸ್ತಿ ಪ್ರದಾನ ಸಮಾರಂಭ ಮಧ್ಯಾಹ್ನ 1ರ ವರೆಗೆ ನಡೆಯಿತು. ಮೈದಾನವು ಜನರಿಂದ ತುಂಬಿ ತುಳುಕುತ್ತಿದ್ದು, ಕಾರ್ಯಕ್ರಮ ವೀಕ್ಷಿಸಲು ಆಡಿಯೋ ಮತ್ತು ವಿಡಿಯೋ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು, ಆದರೆ ಅದರ ಮೇಲೆ ಯಾವುದೇ ಮೇಲ್ಛಾವಣೆ ಅಥವಾ ಪೆಂಡಾಲ್‌ ಇರಲಿಲ್ಲ.
ಮುಖ್ಯಮಂತ್ರಿ ಶಿಂಧೆ ಘಟನೆಯನ್ನು “ದುರದೃಷ್ಟಕರ” ಎಂದು ಕರೆದರು ಮತ್ತು ಸತ್ತವರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರವನ್ನು ಘೋಷಿಸಿದರು.

ಪ್ರಮುಖ ಸುದ್ದಿ :-   ಮಮತಾ ಬ್ಯಾನರ್ಜಿ ಸರ್ಕಾರ ಉರುಳುವವರೆಗೂ ತಲೆ ಕೂದಲು ಬೆಳೆಸೋದಿಲ್ಲ ಎಂದು ತಲೆ ಬೋಳಿಸಿಕೊಂಡಿದ್ದ ಕಾಂಗ್ರೆಸ್‌ ನಾಯಕ ಬಿಜೆಪಿಗೆ...!

ವೈದ್ಯರಿಂದ ಪಡೆದ ಮಾಹಿತಿ ಪ್ರಕಾರ, ಇಂದು 7-8 ಜನರು ಮೃತಪಟ್ಟಿದ್ದಾರೆ, 24 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸನ್‌ಸ್ಟ್ರೋಕ್ ಪ್ರಕರಣವಾಗಿದೆ. ಸುಮಾರು 50 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅದರಲ್ಲಿ 24 ಜನರು ಇನ್ನೂ ಇದ್ದಾರೆ, ಉಳಿದವರು ಪ್ರಾಥಮಿಕ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ’’ ಎಂದು ಆಸ್ಪತ್ರೆಯಿಂದ ಹೊರಬರುತ್ತಿರುವಾಗ ಶಿಂಧೆ ಸುದ್ದಿಗಾರರಿಗೆ ತಿಳಿಸಿದರು.
ಶಾಖ-ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಸರ್ಕಾರವು ಹಣವನ್ನು ನೀಡುತ್ತದೆ ಎಂದು ಫಡ್ನವಿಸ್ ಟ್ವೀಟ್ ಮಾಡಿದ್ದಾರೆ.
ಇಂದು ಬೆಳಿಗ್ಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಕೆಲವು ಸದಸ್ಯರು ಶಾಖದ ಹೊಡೆತದಿಂದ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ… ಅವರ ಕುಟುಂಬಗಳ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ” ಎಂದು ಫಡ್ನವಿಸ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಮುಂದಿನ ಐದು ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ 3-5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ.
ಐಎಂಡಿ (IMD) ಪ್ರಕಾರ, 1901 ರಲ್ಲಿ ರೆಕಾರ್ಡ್-ಕೀಪಿಂಗ್ ಪ್ರಾರಂಭವಾದಾಗಿನಿಂದ ಭಾರತವು ಈ ವರ್ಷ ಫೆಬ್ರವರಿಯಲ್ಲಿ ಅತಿ ಹೆಚ್ಚು ತಾಪಮಾನವನ್ನು ವರದಿ ಮಾಡಿದೆ. ಆದಾಗ್ಯೂ, ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯು ಮಾರ್ಚ್‌ನಲ್ಲಿ ತಾಪಮಾನವನ್ನು ನಿಯಂತ್ರಣದಲ್ಲಿಟ್ಟಿತು.

ಪ್ರಮುಖ ಸುದ್ದಿ :-   ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement