ವೀಡಿಯೊ: ಕಾಂಗ್ರೆಸ್‌ ಸೇರ್ಪಡೆ ನಂತರ ಹುಬ್ಬಳ್ಳಿಗೆ ಬಂದ ಜಗದೀಶ ಶೆಟ್ಟರ ಅವರನ್ನು ತಬ್ಬಿಕೊಂಡು ಗಳಗಳನೆ ಅತ್ತ ಪತ್ನಿ ಶಿಲ್ಪಾ ಶೆಟ್ಟರ

posted in: ರಾಜ್ಯ | 0

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು, ಸೋಮವಾರ ಬೆಳಿಗ್ಗೆ ಕಾಂಗ್ರೆಸ್ ಸೇರಿದ ಕೆಲವೇ ಗಂಟೆಗಳ ನಂತರ ಅವರು ತಮ್ಮ ಕ್ಷೇತ್ರ ಹುಬ್ಬಳ್ಳಿಗೆ ಆಗಮಿಸಿದಾಗ ಅವರಿಗೆ ಭಾವನಾತ್ಮಕವಾದ ಸ್ವಾಗತ ಸಿಕ್ಕಿತು.
ವೀಡಿಯೊದಲ್ಲಿ ಜಗದೀಶ್ ಶೆಟ್ಟರ್ ಅವರ ಪತ್ನಿ ಶಿಲ್ಪಾ ಅವರ ಅವರನ್ನು ತಬ್ಬಿಕೊಂಡು ಅಳುತ್ತಿರುವುದು ಕಂಡುಬಂದಿದೆ. ಇದೇವೇಳೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಹರ್ಷೋದ್ಗಾರ ಮಾಡಿದರು ಮತ್ತು ಅವರನ್ನು ಅಭಿನಂದಿಸಿ ಘೋಷಣೆಗಳನ್ನು ಕೂಗಿದರು.
ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಯಲ್ಲಿ ಅವರಿಗೆ ಅಭ್ಯರ್ಥಿ ಸ್ಥಾನವನ್ನು ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್‌ ಕೇಳಿಕೊಂಡ ನಂತರ ಅಸಮಾಧಾನಗೊಂಡ ಭಾನುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶೆಟ್ಟರ ಇಂದು, ಸೋಮವಾರ ಬೆಳಿಗ್ಗೆ ಕಾಂಗ್ರೆಸ್ ಸೇರಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸೇರಿದ ನಂತರ ಹುಬ್ಬಳ್ಳಿಗೆ ತಮ್ಮ ಮನೆ ತಲುಪುತ್ತಿದ್ದಂತೆ, ಶೆಟ್ಟರ್ ಅವರ ಪತ್ನಿ ಅವರು ಭಾವೋದ್ಗೇಗಕ್ಕೆ ಒಳಗಾದರು.. ಶೆಟ್ಟರ ಅವರನ್ನು ತಬ್ಬಿಕೊಂಡು ಗಳಗಳನೆ ಅತ್ತರು. 40 ವರ್ಷಕ್ಕೂ ಅಧಿಕ ಕಾಲ ಪಕ್ಷಕ್ಕೆ ದುಡಿದವರಿಗೆ ಟಿಕೆಟ್ ಕೊಡದೆ ಮೋಸ ಮಾಡಲಾಗಿದೆ, ಬಿಜೆಪಿ ವಿಶ್ವಾಸದ್ರೋಹ ಮಾಡಿದೆ ಎಂದು ಶಿಲ್ಪಾ ಶೆಟ್ಟರ ಕಣ್ಣೀರು ಹಾಕಿದರು. ಶೆಟ್ಟರ ಅವರು ಅವರನ್ನು ಸಮಾಧಾನಪಡಿಸಲು ಯತ್ನಿಸಿದರು. ಈ ವೇಳೆ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಗುಲಾಬಿ ದಳಗಳ ಸುರಿಮಳೆಗೈದರು.
ಶೆಟ್ಟರ ಅವರು ಕಾಂಗ್ರೆಸ್‌ಗೆ ತಮ್ಮ ನಿಷ್ಠ ಬದಲಾಯಿಸುವ ಮೊದಲು ಭಾನುವಾರ ಸಂಜೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳಿದ್ದರು.

ಹಿರಿಯ ನಾಯಕನಾಗಿದ್ದ ನನಗೆ ಬಿಜೆಪಿ ಟಿಕೆಟ್ ನೀಡುತ್ತದೆ ಎಂದು ಭಾವಿಸಿದ್ದೆ, ಆದರೆ ನನಗೆ ಟಿಕೆಟ್ ಸಿಗುತ್ತಿಲ್ಲ ಎಂದು ತಿಳಿದಾಗ ನನಗೆ ಆಘಾತವಾಯಿತು, ಯಾರೂ ನನ್ನೊಂದಿಗೆ ಮಾತನಾಡಲಿಲ್ಲ, ಮನವೊಲಿಸಲು ಪ್ರಯತ್ನಿಸಲಿಲ್ಲ ಎಂದು ಶೆಟ್ಟರ್ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡ ನಂತರ ಸುದ್ದಿಗಾರರಿಗೆ ತಿಳಿಸಿದರು. ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸುವಾಗ ಬಿಜೆಪಿ ನಾಯಕತ್ವವು ತಮ್ಮನ್ನು ನಡೆಸಿಕೊಂಡ ರೀತಿಗೆ ತಮಗೆ ಅಸಮಾಧಾನವಿದೆ ಎಂದು ಅವರು ಹೇಳಿದರು. ನಾನು ಕಟ್ಟಿದ ಪಕ್ಷದಿಂದ ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಯಿತು ಮತ್ತು ಬಲವಂತವಾಗಿ ಹೊರಹಾಕಲಾಯಿತು, ನಾನು ಕಾಂಗ್ರೆಸ್‌ ಸಿದ್ಧಾಂತ ಮತ್ತು ತತ್ವಗಳನ್ನು ಒಪ್ಪಿಕೊಂಡು ಈ ಪಕ್ಷವನ್ನು ಸೇರುತ್ತಿದ್ದೇನೆ ಎಂದು ಅವರು ಹೇಳಿದರು.
ಶೆಟ್ಟರ ಅವರು ಈ ಹಿಂದೆ ಆರು ಚುನಾವಣೆಗಳಲ್ಲಿ ಗೆದ್ದಿದ್ದಾರೆ. ಅವರು 2018 ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ 21,000 ಕ್ಕೂ ಹೆಚ್ಚು ಮತಗಳಿಂದ ಗೆದ್ದರು, ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಾ.ಮಹೇಶ ನಾಲವಾಡ ಅವರನ್ನು ಸೋಲಿಸಿದರು.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement