ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಬಿಜೆಪಿ : ನಾಳೆ ಹುಬ್ಬಳ್ಳಿಗೆ ನಡ್ಡಾ ಆಗಮನ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಜಾಗೃತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಜೆ.ಪಿ. ನಡ್ಡಾ ಅವರು ಹುಬ್ಬಳ್ಳಿ- ಧಾರವಾಡಕ್ಕೆ ಮಂಗಳವಾರ, ನವೆಂಬರ್‌ 18ರಂದು ಆಗಮಿಸಲಿದ್ದು, ಎರಡು ದಿನ ಜಿಲ್ಲೆಯಲ್ಲೇ ವಾಸ್ತವ್ಯ ಠಿಕಾಣಿ ಹೂಡಲಿದ್ದಾರೆ ಎಂದು ವರದಿಯಾಗಿದೆ. ಶೆಟ್ಟರ ಬಿಜೆಪಿ ತೊರೆದ ನಂತರ ಡ್ಯಾಮೇಜ್‌ ಆಗದಂತೆ ತಡೆಯಲು ಬಿಜೆಪಿ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಲಿದ್ದಾರೆ ಎಂದು ಹೇಳಲಾಗಿದೆ.
ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಶತಾಯ-ಗತಾಯ ಪ್ರಯತ್ನಿಸಿದ ಶೆಟ್ಟರ, ಬಿಜೆಪಿ ತಮ್ಮ ಮನವಿಗೆ ಸೊಪ್ಪು ಹಾಕದಿದ್ದಾಗ ಪಕ್ಷಕ್ಕೆ ಗುಡ್ ಬೈ ಹೇಳಿ ʼಕೈʼ ಪಕ್ಷ ಹಿಡಿದು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ. ವಿಶೇಷವಾಗಿ ಲಿಂಗಾಯತ ಸಮುದಾಯದ ನಾಯಕರಾಗಿರುವ ಶೆಟ್ಟರ ಪಕ್ಷ ತ್ಯಜಿಸಿದ್ದರಿಂದ ಉಂಟಾಗಬಹುದಾದ ಹಾನಿ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಹಾಗೂ ಪರಿಸ್ಥಿತಿ ಅವಲೋಕಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಈ ಸಂದರ್ಭದ ಲಾಭ ಮಾಡಿಕೊಳ್ಳಲು ಬಿಜೆಪಿ ಲಿಂಗಾಯತ ವಿರೋಧಿ ಎಂಬಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಬಿಜೆಪಿಯು ಜಾಗೃತಗೊಂಡಿದೆ.
ಎರಡು ದಿನ ವಾಸ್ತವ್ಯ…
ಎರಡು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹುಬ್ಬಳ್ಳಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಡೆಯುವ ಎರಡು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಈ ವೇಳೆ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಲಿದ್ದಾರೆ. ಮೂರು ಸಾವಿರ ಮಠ, ಸಿದ್ಧಾರೂಡರ ಮಠ ಮಠಕ್ಕೆ ಭೇಟಿ ನೀಡಲಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ವೇಳೆ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement