ತೀವ್ರ ಶಾಖದ ಅಲೆ : ಪಶ್ಚಿಮ ಬಂಗಾಳದಲ್ಲಿ ಒಂದು ವಾರ ಶಾಲಾ ಕಾಲೇಜುಗಳಿಗೆ ರಜೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ 17ರಿಂದ ವಾರದ ವರೆಗೆ ಎಲ್ಲ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.
ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿ ಶಾಖದ ಅಲೆಗಳ ತೀವ್ರತೆ ಹೆಚ್ಚಾಗಿರುವುದರಿಂದ ಮುಂದಿನ ಆದೇಶದವರೆಗೂ ರಜೆ ಮುಂದುವರಿಯಲಿದೆ ಎಂದು ಬಂಗಾಳ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಶಾಖದ ಅಲೆಗಳ ಪರಿಣಾಮ ಏಪ್ರಿಲ್‌ 19ರವರೆಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮುಂದುವರಿಯಲಿದೆ. ಕೋಲ್ಕತ್ತದಲ್ಲಿ ಭಾನುವಾರ (ಏಪ್ರಿಲ್‌ 16) ಕನಿಷ್ಠ 29.6 ಡಿಗ್ರಿ ಸೆಲ್ಸಿಯಸ್‌ ಮತ್ತು ಗರಿಷ್ಠ 39.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಿರುವ ಶಾಖದ ಅಲೆಗಳ ಪರಿಸ್ಥಿತಿ ಪರಿಗಣಿಸಿ ಏಪ್ರಿಲ್ 17ರಿಂದ ಅನ್ವಯವಾಗುವಂತೆ ವಾರದ ಮಟ್ಟಿಗೆ ರಾಜ್ಯದಲ್ಲಿರುವ ಎಲ್ಲ ಸ್ವಾಯತ್ತ, ರಾಜ್ಯ, ಕೇಂದ್ರ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರುತ್ತದೆ. ಡಾರ್ಜಲಿಂಗ್‌ ಮತ್ತು ಕಾಲೀಮ್‌ಜಂಗ್‌ ಜಿಲ್ಲೆಗಳ ಬೆಟ್ಟ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳಿಗೆ ಇದು ಅನ್ವಯವಾಗುವುದಿಲ್ಲ” ಎಂದು ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ ಅಧಿಸೂಚನೆ ಹೇಳಿದೆ.
ಶಾಲೆಗಳು ಪುನರಾರಂಭ ಆಗುವವರೆಗೂ ಬೋಧಕ ಮತ್ತು ಬೋಧಕೇತರ ವರ್ಗದವರಿಗೂ ರಜೆ ಇರಲಿದೆ ಎಂದು ಆದೇಶ ಹೇಳಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಗಮನಿಸಬೇಕಾದ ಅಂಶವೆಂದರೆಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯನ್ನು ಮುಂಚಿತವಾಗಿ ನೀಡಲು ರಾಜ್ಯ ಸರ್ಕಾರವು ಏಪ್ರಿಲ್ 13 ರಂದು ನಿರ್ಧರಿಸಿತ್ತು. ಪಶ್ಚಿಮ ಬಂಗಾಳದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಗಳು ಈಗ ಮೊದಲಿದ್ದ ವೇಳಾಪಟ್ಟಿ ಮೇ 24 ರ ಬದಲಿಗೆ ಮೇ 2 ರಿಂದ ಬೇಸಿಗೆ ರಜೆ ಪ್ರಾರಂಭವಾಗುತ್ತವೆ. ಬಂಕುರಾ, ಪುರುಲಿಯಾ, ಪಶ್ಚಿಮ ಮೇದಿನಿಪುರ್, ಪಶ್ಚಿಮ್ ಬರ್ಧಮಾನ್ ಮತ್ತು ಬಿರ್ಭುಮ್ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ನಿರೀಕ್ಷಿತ ತಾಪಮಾನ ಏರಿಕೆಯ ಕುರಿತು ಹವಾಮಾನ ಇಲಾಖೆಗಳ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಹೆಚ್ಚಿನ ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ ಮತ್ತು ಏಪ್ರಿಲ್ 19 ರವರೆಗೆ ಬಿಸಿಗಾಳಿ ಪರಿಸ್ಥಿತಿಗಳು ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಸ್ತುತ ಸ್ಥಿತಿಯಲ್ಲಿ ಜನರು ಶಾಖದ ಅಲೆಗಳ ಬಗ್ಗೆ ಹೆಚ್ಚು ನಿಗಾವಹಿಸಬೇಕಿದೆ. ಬಿಸಿಲಿನ ತಾಪ ಹೆಚ್ಚಿರುವ ಮಧ್ಯಾಹ್ನದಿಂದ ಸಂಜೆ 4 ಗಂಟೆಗಳವರೆಗೂ ಜನರು ಮನೆಯಿಂದ ಹೊರಗೆ ಬರುವುದನ್ನು ತಪ್ಪಿಸಬೇಕು” ಎಂದು ಹವಾಮಾನ ಇಲಾಖೆ ಹೇಳಿದೆ.
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ (ಏಪ್ರಿಲ್ 17) ಆರೆಂಜ್ ಅಲರ್ಟ್ ಘೋಷಿಸಿದೆ. ಅಷ್ಟೇ ಅಲ್ಲದೆ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಬಿಹಾರ, ಸಿಕ್ಕಿಂ, ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಐಎಂಡಿ ಶಾಖದ ಅಲೆಗಳ ಎಚ್ಚರಿಕೆ ನೀಡಿದೆ. ಭಾರತದ ವಾಯುವ್ಯ ಮತ್ತು ಪೂರ್ವ ಭಾಗ ಹಾಗೂ ಮಧ್ಯಪ್ರದೇಶದಲ್ಲಿ ಗರಿಷ್ಠ 40 ರಿಂದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ” ಎಂದು ಐಎಂಡಿ ಹೇಳಿದೆ. ಬಿಹಾರದ ಬಹುತೇಕ ಜಿಲ್ಲೆಗಳು ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಲಿವೆ. ಏಪ್ರಿಲ್ 19 ಮತ್ತು 20 ತಾಪಮಾನ ಗರಿಷ್ಠ 42-44 ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಪ್ರಮುಖ ಸುದ್ದಿ :-   ಸರಿಯಾಗಿ ಅಡುಗೆ ಮಾಡಲಿಲ್ಲ ಎಂಬ ಕಾರಣಕ್ಕೆ ಅಜ್ಜಿಗೆ ಬರ್ಬರವಾಗಿ ಥಳಿಸಿದ ಮೊಮ್ಮಗ-ಆತನ ಪತ್ನಿ : ವೀಡಿಯೊ ವೈರಲ್‌, ಇಬ್ಬರ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement