ಬಿಜೆಪಿ 3ನೇ ಪಟ್ಟಿಯಲ್ಲಿ ಮೂವರು ಶಾಸಕರಿಗೆ ಕೈತಪ್ಪಿದ ಟಿಕೆಟ್‌

ಬೆಂಗಳೂರು: ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲೂ ಬಿಜೆಪಿ ಮೂವರು ಹಾಲಿ ಶಾಸಕರಿಗೆ ಕೊಕ್ ನೀಡಿದೆ.
ಬಿಜೆಪಿ ಈವರೆಗೆ ಬಿಡುಗಡೆ ಮಾಡಿದ್ದ 2 ಪಟ್ಟಿಗಳಲ್ಲಿ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಸೋಮವಾರ 3ನೇ ಪಟ್ಟಿಯಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇನ್ನೂ 2 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಮೂವರು ಹಾಲಿ ಶಾಸಕರಿಗೆ ಕೊಕ್‌ ನೀಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಟಿಕೆಟ್‌ ನೀಡಿಲ್ಲ, ಅವರ ಬದಲಿಗೆ ಅವರ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಜಗದೀಶ ಶೆಟ್ಟರ ಅವರ ಬದಲಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ ಅವರಿಗೂ ಟಿಕೆಟ್ ಕೈತಪ್ಪಿದೆ. ರಾಮದಾಸ ಅವರ ಬದಲು ಶ್ರೀವತ್ಸ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಕೊಟ್ಟಿದೆ. ಹೀಗಾಗಿ ರಾಮದಾಸ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ಎರಡು ಕ್ಷೇತ್ರಗಳ ಟಿಕೆಟ್ ಹಂಚಿಕೆಯನ್ನು ಬಿಜೆಪಿ ಮಾಡಬೇಕಿದೆ. ಮಾನ್ವಿ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮ ಆಗಿಲ್ಲ. ಶಿವಮೊಗ್ಗ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ, ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದರು. ಈಶ್ವರಪ್ಪ ಅವರ ರಾಜೀನಾಮೆ ಬಳಿಕ, ಈ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮಗೊಳಿಸಿಲ್ಲ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement