ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಬಿಜೆಪಿಯಿಂದ ಎರಡು ದಿನಗಳ ಹಿಂದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಇದೇರೀತಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಸಿ.ಟಿ.ರವಿ ವಿರುದ್ಧ ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಎಚ್. ಡಿ. ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ 4 ನೇ ಪಟ್ಟಿಯಲ್ಲಿ ಒಟ್ಟು 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಅಭ್ಯರ್ಥಿಗಳ ಪಟ್ಟಿ ಇಂತಿದೆ…
ಲಿಂಗಸುಗೂರು ಕ್ಷೇತ್ರ -ದುರ್ಗಪ್ಪ ಎಸ್ ಹೂಲಗೇರಿ
ಹುಬ್ಬಳ್ಳಿ ಧಾರವಾಡ- ಸೆಂಟ್ರಲ್-ಜಗದೀಶ ಶೆಟ್ಟರ
ಹುಬ್ಬಳ್ಳಿ ಧಾರವಾಡ ಪಶ್ಚಿಮ-ದೀಪಕ ಚಿಂಚೋರೆ
ಶಿಗ್ಗಾಂವಿ ಕ್ಷೇತ್ರ- ಮೊಹಮದ್ ಯೂಸುಫ್ ಸವಣೂರು
ಹರಿಹರ ಕ್ಷೇತ್ರ –ನಂದಗಾವಿ ಶ್ರೀನಿವಾಸ
ಚಿಕ್ಕಮಗಳೂರು-ಎಚ್. ಡಿ. ತಮ್ಮಯ್ಯ
ಶ್ರವಣಬೆಳಗೊಳ- ಎಂ.ಎ ಗೋಪಾಲಸ್ವಾಮಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ