ಮಂಗಳೂರು: ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಕಾರು ಬೇಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮಗು, ಓರ್ವ ಮಹಿಳೆ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ತೂಫಾನ್ನಲ್ಲಿ ಪ್ರಯಾಣಿಸುತ್ತಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ