ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಮೇ 10ರಂದು ನಡೆಯಲಿರುವ ಚುನಾವಣೆಗೆ ರಾಜ್ಯದ ಆಡಳಿತಾರೂಢ ಪಕ್ಷವಾದ ಬಿಜೆಪಿ ಸ್ಟಾರ್ ತನ್ನ ಪಕ್ಷದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ 40 ಸ್ಟಾರ್ ಪ್ರಚಾರಕರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.
ಇವರು ಬಿಜೆಪಿಯ ಸ್ಟಾರ್‌ ಪ್ರಚಾರಕರು…
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ ಸಿಂಗ್‌‌, ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರ್‌. ಅಶೋಕ್‌, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್‌, ಇತರ ನಾಯಕರಾದ ಮನ್ಸುಖ್‌ ಮಂಡಾವಿಯಾ, ಅಣ್ಣಾಮಲೈ, ಅರುಣ್‌ ಸಿಂಗ್‌, ಡಿ.ಕೆ. ಅರುಣಾ, ಸಿ.ಟಿ ರವಿ, ಯೋಗಿ ಆದಿತ್ಯನಾಥ್‌, ಶಿವರಾಜ್‌ ಸಿಂಗ್‌ ಚೌಹಾನ್‌, ಹೇಮಂತ್‌ ಬಿಸ್ವಾ ಶರ್ಮಾ, ದೇವೇಂದ್ರ ಫಡ್ನವಿಸ್‌, ಪ್ರಭಾಕರ್‌ ಕೋರೆ, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ, ಭಗವಂತ್‌ ಖೂಬಾ, ಅರವಿಂದ ಲಿಂಬಾವಳಿ, ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಸನ ಗೌಡ ಪಾಟೀಲ್‌ ಯತ್ನಾಳ್‌, ಉಮೇಶ್‌ ಜಾಧವ್‌, ಚಲವಾದಿ ನಾರಾಯಣ ಸ್ವಾಮಿ, ಎನ್‌. ರವಿಕುಮಾರ್‌, ಜಿ.ವಿ. ರಾಜೇಶ್‌, ಜಗ್ಗೇಶ್‌, ಶ್ರುತಿ, ತಾರಾ ಅನುರಾಧ ಅವರು ಬಿಜೆಪಿ ಸ್ಟಾರ್‌ ಪ್ರಚಾರಕರಾಗಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement