ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು ; ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು, ಬುಧವಾರ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಟಾರ್‌ ಪ್ರಚಾರಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಎ<ಬಿ.ಪಾಟೀಲ, ನಟಿ ರಮ್ಯಾ, ಕನಟ ರಾಜ ಬಬ್ಬರ್‌, ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್‌ ಸಹ ಇದ್ದಾರೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಸೇರಿದ ಜಗದೀಶ ಶೆಟ್ಟರ ಅವರ ಹೆಸರೂ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದೆ.
ಕಾಂಗ್ರೆಸ್‌ ಸ್ಟಾರ್‌ ಕ್ಯಾಂಪೇನರ್‌ಗಳ ಪಟ್ಟಿ
ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ, ಕೆ.ಸಿ. ವೇಣುಗೋಪಾಲ, ರಣದೀಪ್‌ ಸಿಂಗ್‌ ಸುರ್ಜೇವಾಲಾ, ಅಶೋಕ್‌ ಗೆಹ್ಲೋಟ್‌, ಭೂಪೇಶ್‌ ಬಘೇಲ್‌, ಸುಕ್ವಿಂದರ್‌ ಸಿಂಗ್‌ ಸುಕ್ಕು, ಪಿ ಚಿದಂಬರಂ ಪೃಥ್ವಿರಾಜ ಚವ್ಹಾಣ, ಅಶೋಕ್‌ ಚವ್ಹಾಣ, ಶಶಿ ತರೂರ್‌, ಬಿ.ಕೆ. ಹರಿಪ್ರಸಾದ, ಎಂ.ಬಿ. ಪಾಟೀಲ, ಡಾ.ಜಿ ಪರಮೇಶ್ವರ. ಕೆ.ಎಚ್‌. ಮುನಿಯಪ್ಪ, ಜೈರಾಮ ರಮೇಶ, ಎಂ ವೀರಪ್ಪ ಮೊಯ್ಲಿ, ರಾಮಲಿಂಗಾರೆಡ್ಡಿ, ಸತೀಶ ಜಾರಕಿಹೊಳಿ, ಜಗದೀಶ್‌ ಶೆಟ್ಟರ, ಡಿ.ಕೆ. ಸುರೇಶ,
ಜಿ.ಸಿ. ಚಂದ್ರಶೇಖರ, ಸೈಯದ್‌ ನಾಸೀರ್‌ ಹುಸೇನ್‌, ಜಮೀರ್‌ ಅಹಮದ್‌ ಖಾನ್‌, ಎಚ್‌.ಎಂ. ರೇವಣ್ಣ, ಉಮಾಶ್ರೀ
ರೇವಂತ್‌ ರೆಡ್ಡಿ, ರಮೇಶ ಚೆನ್ನಿತಾಲಾ, ಬಿ.ವಿ. ಶ್ರೀನಿವಾಸ, ರಾಜ್‌ ಬಬ್ಬರ್‌, ಮೊಹಮದ್‌ ಅಜರುದ್ದೀನ್‌, ರಮ್ಯಾ,
ಇಮ್ರಾನ್‌ ಪ್ರತಾಪ್ಗರಿ, ಕನ್ನಯ್ಯಾ ಕುಮಾರ, ರೂಪಾ ಶಶಿಧರ, ಸಾಧುಕೋಕಿಲ ಇವರಿ ಸ್ಟಾರ್‌ ಪ್ರಚಾರಕರಾಗಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement