ಜೆಡಿಎಸ್ ಸೇರ್ಪಡೆಯಾಗಿ ಬಿ.ಫಾರ್ಮ್‌ ಪಡೆದ ಆಯನೂರು ಮಂಜುನಾಥ

ಶಿವಮೊಗ್ಗ: ಬಿಜೆಪಿಗೆ ಗುಡ್‌ಬೈ ಹೇಳಿದ್ದ ಹಿರಿಯ ನಾಯಕ ಆಯನೂರು ಮಂಜುನಾಥ ಇಂದು, ಬುಧವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚಿತ್ರದುರ್ಗದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ರಾಜಕೀಯದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕ ಬಿಜೆಪಿ ತ್ಯಜಿಸಿದ್ದಾರೆ. ಅವರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಜೆಡಿಎಸ್‌ನಿಂದ ಬಿ.ಫಾರ್ಮ್‌ ಸಹ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು, ಬುಧವಾರ (ಏಪ್ರಿಲ್ 19) ಬೆಳಿಗ್ಗೆ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದ ಆಯನೂರು ಮಂಜುನಾಥ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಮಧ್ಯಾಹ್ನದ ವೇಳೆಗೆ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದ್ದರು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಬಿಜೆಪಿಯ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಲು ಹುಬ್ಬಳ್ಳಿಗೆ ತೆರಳುತ್ತದ್ದಾಗ ಚಿತ್ರದುರ್ಗದಲ್ಲಿ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾಋಸ್ವಾಂಇ ಅವರನ್ನು ಭೇಟಿಯಾಗಿ ಅಲ್ಲಿಯೇ ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್‌ನಿಂದ ಬಿ.ಫಾರ್ಮ್‌ ಸಹ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗ ನಗರ ಕ್ಷೇತ್ರದಿಂದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ನಾಳೆ ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಪ್ರಮುಖ ಸುದ್ದಿ :-   ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement