ಇಂದಿನಿಂದ ನಟ ಕಿಚ್ಚ ಸುದೀಪ ಪ್ರಚಾರ ಶುರು: ಇಂದು ಸಿಎಂ ಬೊಮ್ಮಾಯಿ ಪರ ಶಿಗ್ಗಾಂವಿಯಲ್ಲಿ ಪ್ರಚಾರ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಇಂದು ಪ್ರಚಾರ ಮಾಡಲಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದು (ಏ.19) ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ನಟ ಸುದೀಪ​ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಭಾಗಿಯಾಗಲಿದ್ದಾರೆ. ಸಚಿವರಾದ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ನಂತರ ಶಿಗ್ಗಾವಿಯ ಹೈಗ್ರೌಂಡ್ಸ್ ನಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅದರಲ್ಲಿಯೂ ಅವರು ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಸುಮಾರು 30 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ. ಇತ್ತೀಚೆಗೆ, ಮುಖ್ಯಮಂತ್ರಿ ಬೊಮ್ಮಾಯಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದರು. ಈಗ, ಮತ್ತೊಮ್ಮೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement