ಕರ್ನಾಟಕದಲ್ಲಿ ಮುಗಿಯದ ತಾಪ: ಇನ್ನೂ ಹೆಚ್ಚಲಿದೆ ತಾಪಮಾನ

ಬೆಂಗಳೂರು; ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಈ ತಾಪಮಾನ ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಮಂಗಳವಾರ ಯಾದಗಿರಿಯಲ್ಲಿ ಗರಿಷ್ಠ 42 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ರಾಜ್ಯದಲ್ಲಿಯೇ ಇದು ಅತಿಹೆಚ್ಚು ತಾಪಮಾನ ಎನಿಸಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಯಚೂರು 41 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 40 ಡಿಗ್ರಿ ಸೆಲ್ಸಿಯಸ್, ವಿಜಯಪುರ 40.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅಲ್ಲದೆ, ಶಿವಮೊಗ್ಗ, ದಾವಣಗೆರೆ, ಹಾವೇರಿ, ರಾಯಚೂರು, ಕಲಬುರಗಿ ಮತ್ತು ಬಾಗಲಕೋಟೆಯಲ್ಲಿ ಉಷ್ಣಾಂಶ 40 ಡಿಗ್ರಿ ದಾಟಿದೆ. ಬೆಂಗಳೂರು 36.5 ಡಿಗ್ರಿ ಸೆಲ್ಸಿಯಸ್ ಹಾಗೂ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ ಎಂದು ಅದು ತಿಳಿಸಿದೆ.
ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದೆರಡು ದಿನಗಳಲ್ಲಿ ಚಿಕ್ಕಮಗಳೂರು, ಕೊಡಗು ಮತ್ತು ತುಮಕೂರು ಜಿಲ್ಲೆಗಳ ನಾನಾ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement