ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ: ಇಂದು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು, ಬುಧವಾರ ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಹಾಗೂ ನಾಳೆ (ಏಪ್ರಿಲ್‌ ೨೦) ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಳ್ಳಂಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಟಿಕೆಟ್​ಗೋಸ್ಕರ ನಾನು ಪಕ್ಷ ಬಿಡುತ್ತಿಲ್ಲ. ನಗರದ ಋಣ ತೀರಿಸಲು ಈ ನಿರ್ಧಾರ ಮಾಡಿರುವೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಅವರು ಹೇಳಿಲ್ಲ. ಆಯನೂರು ಮಂಜುನಾಥ ಅವರು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಹರಿಹಾಯುತ್ತಲೇ ಬಂದಿದ್ದರು. ಪಕ್ಷೇತರರಾಗಿ ಸ್ಪರ್ಧಿಸುವುದಾಗಿಯೂ ಹೇಳಿಕೊಂಡಿದ್ದರು

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement