ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು : ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ 6 ನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಾಕಿ ಉಳಿದಿದ್ದ 5 ಕ್ಷೇತ್ರಗಳಿಗೆ ಬುಧವಾರ ತಡರಾತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿಡ್ಲಘಟ್ಟದಲ್ಲಿ ಹಾಲಿ ಶಾಸಕ ಮುನಿಯಪ್ಪ ಹಾಗೂ ರಾಯಚೂರು ನಗರದಲ್ಲಿ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಭೋಸರಾಜು ಅವರ ಕುಟುಂಬಕ್ಕೆ ಟಿಕೆಟ್‌ ಕೈತಪ್ಪಿದೆ.
ಅಭ್ಯರ್ಥಿಗಳ ಪಟ್ಟಿ….
ರಾಯಚೂರು ನಗರ ವಿಧಾಸಭಾ ಕ್ಷೇತ್ರ-ಮೊಹಮ್ಮದ್‌ ಶಾಲಂ
ಶಿಡ್ಲಘಟ್ಟ ವಿಧಾಸಭಾ ಕ್ಷೇತ್ರ-ಬಿ ವಿ ರಾಜೀವ್‌ ಗೌಡ
ಬೆಂಗಳೂರು ಸಿ.ವಿ. ರಾಮನ್‌ ನಗರ ಕ್ಷೇತ್ರ (ಎಸ್‌ಸಿ )-ಎಸ್‌. ಆನಂದಕುಮಾರ
ಅರಕಲಗೂಡು ಕ್ಷೇತ್ರ-ಎಚ್‌.ಪಿ ಶ್ರೀಧರ್‌ ಗೌಡ
ಮಂಗಳೂರು ನಗರ ಉತ್ತರ ಕ್ಷೇತ್ರ- ಇನಾಯತ್‌ ಅಲಿ ಅವರಿಗೆ ಟಿಕೆಟ್‌ ನೀಡಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಎಲ್ಲ 224 ಕ್ಷೇತ್ರಗಳಿಗೂ ಟಿಕೆಟ್‌ ಗೋಷಣೆ ಮಾಡಿದಂತಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement