ಕನಕಪುರದಲ್ಲಿ ಕೊನೆ ಕ್ಷಣದ ಅಚ್ಚರಿ : ಡಿಕೆಶಿ ಸ್ಪರ್ಧಿಸಿರುವ ಕ್ಷೇತ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹೋದರನಿಂದ ನಾಮಪತ್ರ ಸಲ್ಲಿಕೆ…!

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಸ್ಪರ್ಧಿಸಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ಟ್ವಿಸ್ಟ್‌ ಕಂಡುಬಂದಿದೆ. ಡಿ.ಕೆ ಶಿವಕುಮಾರ ಅವರನ್ನು ಕಟ್ಟಿ ಹಾಕಲು ಬಿಜೆಪಿ ರಣತಂತ್ರ ರೂಪಿಸಿ ಸಚಿವ ಆರ್.ಅಶೋಕ ಅವರನ್ನು ಕಣಕ್ಕಿಳಿಸಿದ್ದು ಒಂದೆಡೆಯಾದರೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಗುರುವಾರ ಮತ್ತೊಂದು ಅಚ್ಚರಿಯ ಬೆಳವಣಿಗೆಯಾಗಿದೆ. ಈಗ ಕನಕಪುರದಲ್ಲಿ ಡಿ.ಕೆ.ಶಿವಕುಮಾರ ಅವರ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ದಿಢೀರ್‌ ಆಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ..!
ಏಪ್ರಿಲ್ 17ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಇದೀಗ ಅಲ್ಲಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಸಿರುವುದು ಅಚ್ಚಿಯ ಬೆಳವಣಿಗೆಯಾಗಿದೆ.
ಡಿ.ಕೆ ಶಿವಕುಮಾರ​ ಅವರು ಸಲ್ಲಿಸಿರುವ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಡಿ.ಕೆ ಸುರೇಶ ಸಹ ಇಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬೆಂಗಳೂರು ಪದ್ಮನಾಭ ನಗರದಿಂದ ನಾಮಪತ್ರ ಸಲ್ಲಿಸುತ್ತಾರೆ ಎಂದು ಹೇಳಲಾಗಿದ್ದ ಡಿ.ಕೆ.ಸುರೇಶ ಅವರು ಆದ್ರೆ ಕೊನೆ ಗಳಿಗೆಯಲ್ಲಿ ಅದನ್ನು ಬಿಟ್ಟು ಕನಕಪುರ ಕ್ಷೇತ್ರದಿಂದಲೇ ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಾಗುತ್ತಿದೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ಶಿವಕುಮಾರಗೆ ಯಾಕೆ ಕಾಡುತ್ತಿದೆ ಭಯ..?
ಡಿ.ಕೆ. ಶಿವಕುಮಾರ ಅವರ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ಸೇರಿದಂತೆ ಇತ್ಯಾದಿ ಹಲವಾರು ಪ್ರಕರಣಗಳಿವೆ. ನಾಮಪತ್ರ ಸಲ್ಲಿಕೆ ವೇಳೆ ಅವರು ಆಸ್ತಿಯ ವಿವರ, ಪ್ರಕರಣಗಳ ಬಗ್ಗೆ ನಿಯಮಗಳನುಸಾರವಾಗಿ ಅಫಿಡವಿಟ್ ಸಲ್ಲಿಸಿದ್ದರೂ ಅವರಿಗೆ ತಮ್ಮ ನಾಮಪತ್ರ ತಿರಸ್ಕೃತವಾಗಬಹುದು ಎಂದು ಎಲ್ಲೋ ಅನುಮಾನಗಳು ಕಾಡಿದ್ದರಿಂದ ಮುಂಜಾಗ್ರತೆಯಾಗಿ ತಮ್ಮ ತಮ್ಮನಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಏಪ್ರಿಲ್‌ 20ರಂದು ಸಂಸದ ಡಿ.ಕೆ. ಸುರೇಶ ಅವರು ಆರ್‌.ಅಶೋಕ ವಿರುದ್ಧ ಪದ್ಮನಾಭನಗರದಲ್ಲಿ ನಾಮಪತ್ರ ಸಲ್ಲಿಸುತ್ತಾರೆ ಎಂದು ಹೇಳಲಾಗಿತ್ತು. ಚನ್ನಪಟ್ಟಣದಲ್ಲಿ ಮಧ್ಯಾಹ್ನ 12:30 ಸುಮಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಅವರು, ನಾನು ನಾಮಪತ್ರ ಸಲ್ಲಿಸಲು ಬೆಂಗಳೂರಿಗೆ ಹೋಗುತ್ತಿದ್ದೇನೆ, ಮಧ್ಯಾಹ್ನ 2 ಗಂಟೆಯ ನಂತರ ಗೊತ್ತಾಗುತ್ತದೆ ಎಂದು ಹೇಳಿದ್ದೃು. ಹೀಗಾಗಿ ಅವರು ಪದ್ಮನಾಭ ನಗರದಲ್ಲಿ ನಾಮಪತ್ರ ಸಲ್ಲಿಸುತ್ತಾರೆ ಎಂದೇ ಬಾವಿಸಲಾಗಿತ್ತು. ಆದರೆ ಈಗ ಕನಕಪುರದಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿಯ ಬೆಳವಣಿಗೆ ನಡೆದಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement