ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಧಾರವಾಡದ ಸವದತ್ತಿ ರಸ್ತೆಯ ಮುರಘಾಮಠ ಹತ್ತಿರದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು ಉತ್ತಮ ಸಾಧನೆ ಮಾಡಿದೆ.
ಕಲಾ ವಿಭಾಗದಲ್ಲಿ ಅಂಬರೀಷ್ ೯೨.೩೩%(೫೫೪), ವಿನುತಾ ಸತ್ತೂರ ೯೦.೧೭% (೫೪೧), ಗೌತಮ ಗಡಗಿ ೯೦ %(೫೪೦) ಅಂಕಗಳನ್ನು ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ನೂರೈನ್ ಗುಲ್ಬರ್ಗಾ ೯೨.೦೦% (೫೫೨), ಮಲ್ಲಪ್ಪ ಪೂಜಾರ ೮೯.೫೦% (೫೩೭) ಹಾಗೂ ವಿಶಾಲ ಭಟ್ ಜೋಶಿ ೮೫.೮೩ % (೫೧೫) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ಉತ್ತಮ ಶೈಕ್ಷಣಿಕ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು, ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಅವರು ಕಾಲೇಜಿನ ಪ್ರಾಚಾರ್ಯರಾದ ಡಾ. ಭರಮಪ್ಪ ಭಾವಿ ಹಾಗೂ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ