ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರಗೆ ಬಿಗ್‌ ರಿಲೀಫ್‌: ನಾಮಪತ್ರ ಅಂಗೀಕಾರ

ರಾಮನಗರ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನಾಮಪತ್ರ ಅಂಗೀಕಾರವಾಗಿದೆ.
ನಾಮಪತ್ರ ಪರಿಶೀಲನೆ ಇಂದು, ಶುಕ್ರವಾರ (ಏಪ್ರಿಲ್ 21) ನಡೆಯುತ್ತಿದ್ದು, ಭಾರೀ ಕುತೂಹಲ ಕೆರಳಿಸಿದ್ದ ಕನಕಪುರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ಅನುಮೋದಿಸಿದ್ದಾರೆ.
ಅವರು ತಮ್ಮ ನಾಮಪತ್ರ ತಿರಸ್ಕೃತವಾಗಬಹುದೆಂಬ ಭೀತಿಯಲ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ಗಳಿಗೆಯಲ್ಲಿ ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಸದ ಡಿ.ಕೆ. ಸುರೇಶ ಕನಕಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿಯೇ ನಾಮಪತ್ರ ಸಲ್ಲಿಸಿದ್ದರು.
ನಿನ್ನೆ ಗುರುವಾರ ಅಚ್ಚರಿಯ ಬೆಳವಣಿಯಲ್ಲಿ ಸುರೇಶ ಅವರು ದಿಢೀರ್‌ ಆಗಿ ಕನಕಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
ಏಪ್ರಿಲ್ 17ರಂದು ದೊಡ್ಡ ಮೆರವಣಿಗೆಯ ಮೂಲಕ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಡಿ.ಕೆ. ಶಿವಕುಮಾರ ನಾಮಪತ್ರ ಸಲ್ಲಿಸಿದ್ದರು. ಆದಾಗ್ಯೂ ಡಿ.ಕೆ. ಶಿವಕುಮಾರ ಸಲ್ಲಿಸಿದ್ದ ನಾಮಪತ್ರದಲ್ಲಿ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅಥವಾ ಕೆಲವು ಪ್ರಕರಣಗಳಿಂದಾಗಿ ನಾಮಪತ್ರ ತಿರಸ್ಕೃತವಾಗುವ ಭೀತಿ ಹಿನ್ನೆಲಯಲ್ಲಿ ಕಾಂಗ್ರೆಸ್‌ನ ಸಂಭಾವ್ಯ ಬದಲಿ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ ಗುರುವಾರ ನಾಮಪತ್ರ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ಸೋಮವಾರಪೇಟೆ : ಎಸ್​ಎಸ್​​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ; ರುಂಡದೊಂದಿಗೆ ಆರೋಪಿ ಪರಾರಿ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement