ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ (ಏಪ್ರಿಲ್ 21)ದಿಂದ ನಾಲ್ಕೈದು ದಿನಗಳ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 21ರಿಂದ 25ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆ ಬೀಳಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 21ರಿಂದ 25ರವರೆಗೆ ಹಾಗೂ ಏಪ್ರಿಲ್ 21 ಮತ್ತು 22 ರಂದು ಉಡುಪಿ ಜಿಲ್ಲೆಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಏಪ್ರಿಲ್ 21ರಿಂದ 25 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.23 ರಿಂದ ಏ.25ರವರೆಗೆ ಚಾಮರಾಜನಗರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದೆ. ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ. ಏಪ್ರಿಲ್ 21, 22 ಮತ್ತು 25ರಂದು ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗಲಿದೆ. ಏ.23 ರಿಂದ ಏ25 ರವರೆಗೆ ಕೊಪ್ಪಳ ಮತ್ತು ಯಾದಗಿರಿಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು ಭಾಗದಲ್ಲಿ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಮಳೆ ಬೀಳುವ ನಿರೀಕ್ಷೆ ಇದೆ. ಮಲೆನಾಡಿನ ಜಿಲ್ಲೆಗಳನ್ನು ಒಳಗೊಂಡಿರುವ ಈ ಭಾಗದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ.ಮಲೆನಾಡು ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ


ನಿಮ್ಮ ಕಾಮೆಂಟ್ ಬರೆಯಿರಿ