ಹೊನ್ನಾವರ: ಬೋನಿಗೆ ಬಿದ್ದ ಅಪರೂಪದ ಕಪ್ಪು ಚಿರತೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರು ಗ್ರಾಮದ ಜಡ್ಡಿಗದ್ದೆಯಲ್ಲಿ ಆತಂಕಕ್ಕೆ ಕಾರಣವಾಗಿದ್ದ ಕಪ್ಪು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬಂಧಿಯಾಗಿದೆ.
ಹೊನ್ನಾವರ ತಾಲೂಕಿನ ವಂದೂರು ಜಡ್ಡಿಗದ್ದೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಇದು ಮೇಯಲು ಹೋಗುವ ಆಕಳು ಹಾಗೂ ಮನೆಯಂಗಳದಲ್ಲಿನ ನಾಯಿಗಳನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ.
ಉಪಟಳ ನೀಡುತ್ತಿದ್ದ ಚಿರತೆ ರೆ ಹಿಡಿಯಲು ಅರಣ್ಯ ಇಲಾಖೆ ಈ ಭಾಗದಲ್ಲಿ ಬೋನು ಇಟ್ಟಿತ್ತು. ಚಿರತೆಯ ಚಲನವಲನಗಳ ಮೇಲೆ ನಿಗಾ ಇಡುವುದರ ಜೊತೆಗೆ ದಿನನಿತ್ಯ ಬೋನಿನ ಒಂದು ಪ್ರತ್ಯೇಕ ಭಾಗದಲ್ಲಿ ನಾಯಿಯೊಂದನ್ನು ಕಟ್ಟಿ ಹಾಕಿ ಚಿರತೆ ಬೋನಿನೊಳಗೆ ಬರುವಂತೆ ಮಾಡಲಾಗಿತ್ತು.
ನಾಯಿ ಹಿಡಿಯಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಚಿರತೆ ಬಂಧಿಯಾದ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯನ್ನು ಬೋನಿನ ಸಮೇತ ಕಾಸರಕೋಡಿನ ನರ್ಸರಿಗೆ ಸಾಗಿಸಿದರು. ಸೆರೆ ಸಿಕ್ಕಿರುವುದು ೨ರಿಂದ ೩ ವರ್ಷದ ಪ್ರಾಯದ ಗಂಡು ಚಿರತೆ ಎಂದು ಅರ್ಣಯಾಧಿಕಾರಿಗಳು ತಿಳಿಸಿದ್ದಾರೆ. ಇದನ್ನು ದೂರದ ಅರಣ್ಯ ಪ್ರದೇಶದಲ್ಲಿ ಬಿಡಲಾಗುವುದು ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement