ದ್ವಿತೀಯ ಪಿಯುಸಿ ಪರೀಕ್ಷೆ : ಸತತ ಮೂರನೇ ಬಾರಿಗೆ ನೂರಕ್ಕೆ ೧೦೦ ಫಲಿತಾಂಶ ಪಡೆದ ಕುಮಟಾ ಸರಸ್ವತಿ ಪಿಯು ಕಾಲೇಜು

ಕುಮಟಾ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಮಟಾದ ಕೊಂಕಣ ಎಜುಕೇಷನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜ್‌ ಪ್ರತಿಶತ ನೂರಕ್ಕೆ ನೂರು ಫಲಿತಾಂಶ ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ ರಂಜನಾ ಮಡಿವಾಳ ೫೮೮ (೯೮%) ಅಂಕ ಪಡೆದು ರಾಜ್ಯ ಮಟ್ಟದಲ್ಲಿ ೯ ನೇ ಸ್ಥಾನ ಪಡೆದಿದ್ದಾಳೆ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಶ್ರೀನಂದಾ ದಿಂಡೆ ೫೮೬ (೯೭.೬೭%) ಅಂಕ ಪಡೆದು ದ್ವಿತೀಯ ಸ್ಥಾನ, ಪ್ರಾಪ್ತಿ ನಾಯಕ ೫೮೫ (೯೭.೫%) ಅಂಕ ಹಾಗೂ ಶ್ರೀಜನಿ ಭಟ್ ೫೮೫ (೯೭.೫%) ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಪರೀಕ್ಷೆಗೆ ಹಾಜರಾದ ವಿಜ್ಞಾನ ವಿಭಾಗದ ೧೦೪ ವಿದ್ಯಾರ್ಥಿಗಳಲ್ಲಿ ೧೮ ವಿದ್ಯಾರ್ಥಿಗಳು ಶೇಕಡಾ ೯೫ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ, ೨೬ ವಿದ್ಯಾರ್ಥಿಗಳು ಶೇಕಡಾ ೯೦ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ ಮತ್ತು ೨೨ ವಿದ್ಯಾರ್ಥಿಗಳು ಶೇಕಡಾ ೮೫ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ ಹಾಗೂ ೬೬ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಹಾಗೂ ೩೬ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಕೊಂಕಣ ಎಜುಕೇಷನ್ ಟ್ರಸ್ಟ್ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗವು ವಿಧಾತ್ರಿ ಅಕಾಡೆಮಿಯೊಂದಿಗೆ ಸಹಭಾಗಿತ್ವ ಹೊಂದಿದೆ.
ವಾಣಿಜ್ಯ ವಿಭಾಗದಲ್ಲಿ ಶ್ರೀಲಕ್ಷ್ಮಿ ಶೆಟ್ಟಿ ೫೮೮ (೯೮%) ಅಂಕ ಪಡೆದು ರಾಜ್ಯ ಮಟ್ಟದಲ್ಲಿ ೧೦ ನೇ ಸ್ಥಾನ ಪಡೆದಿದ್ದಾರೆ ಹಾಗೂ ಮುಖಾಂತರ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಮೇಹರ್‌ ಸೈಯದ್ ೫೮೧ (೯೬.೮೩%) ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ರೋಶನಿ ನಾಯಕ ೫೮೦ (೯೬.೬೭%) ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ ವಾಣಿಜ್ಯ ವಿಭಾಗದ ೨೧ ವಿದ್ಯಾರ್ಥಿಗಳಲ್ಲಿ ೧೫ ವಿದ್ಯಾರ್ಥಿಗಳು ಶೇಕಡಾ ೮೫ ಕ್ಕಿಂತ ಹೆಚ್ಚು ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಹಾಗೂ ೫ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಶ್ವಸ್ಥರು, ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕರಾದ ಗುರುರಾಜ ಶೆಟ್ಟಿ , ಪ್ರಾಂಶುಪಾಲರಾದ ಕಿರಣ ಭಟ್ಟ, ಉಪ ಪ್ರಾಂಶುಪಾಲರಾದ ಸುಜಾತಾ ಹೆಗಡೆ, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement