ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು

posted in: ರಾಜ್ಯ | 0

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಏಪ್ರಿಲ್ 27ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದೆ.
ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಏಪ್ರಿಲ್‌ 21ರಿಂದ 28ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮೇ 4ರ ಒಳಗೆ ದಂಡ ಸಹಿತ ಶುಲ್ಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮರು ಮೌಲ್ಯಮಾಪನದ ಫಲಿತಾಂಶಕ್ಕೆ ಕಾಯುವ ಅಗತ್ಯವಿಲ್ಲ ಎಂದು ಕೆಎಸ್‌ಇಎಬಿ ಅಧ್ಯಕ್ಷ ರಾಮಚಂದ್ರನ್‌ ಹೇಳಿದ್ದಾರೆ.
ಫಲಿತಾಂಶದ ಪ್ರತಿಯನ್ನು ಪಿಯು ಪರೀಕ್ಷಾ ಪೋರ್ಟಲ್‌ ಮೂಲಕ ಆಯಾ ವಿದ್ಯಾರ್ಥಿಗಳಿಗೆ ಕಳುಹಿಸಲಾಗುತ್ತದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವುದಿಲ್ಲ. ಮಂಡಳಿ ನೀಡಿದ ಫಲಿತಾಂಶದ ಪಟ್ಟಿ ಆಧಾರದಲ್ಲಿ ಹಾಗೂ ಉತ್ತೀರ್ಣರಾದವರು ಫಲಿತಾಂಶ ತಿರಸ್ಕರಿಸಿ, ಫಲಿತಾಂಶದ ಪ್ರತಿ ಸಲ್ಲಿಸಿ ಪೂರಕ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳು ಪಾವತಿಸಬೇಕಾದ ಪರೀಕ್ಷಾ ಶುಲ್ಕ, ಒಂದು ವಿಷಯಕ್ಕೆ-140 ರೂಪಾಯಿ. ಎರಡು ವಿಷಯಕ್ಕೆ- 270 ರೂಪಾಯಿ. ಮೂರು ಅಥವಾ ಹೆಚ್ಚಿನ ವಿಷಯಗಳು- 400 ರೂಪಾಯಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ಪಡೆಯಬೇಕಾದ ಅಂಕಪಟ್ಟಿ ಶುಲ್ಕ- 50 ರೂಪಾಯಿ ಪಾವತಿಸಬೇಕಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement