ಬಿಜೆಪಿ ತೊರೆದ ಮತ್ತೊಬ್ಬ ನಾಯಕಿ : ಸಚಿವ ಆನಂದ ಸಿಂಗ್ ಸಹೋದರಿ ರಾಣಿ ಸಂಯುಕ್ತ ಕಾಂಗ್ರೆಸ್ಸಿಗೆ ಸೇರ್ಪಡೆ

posted in: ರಾಜ್ಯ | 0

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಸದಸ್ಯೆ ಹಾಗೂ ಸಚಿವ ಆನಂದ್ ಸಿಂಗ್ ಸಹೋದರಿ ಬಿಎಲ್ ರಾಣಿ ಸಂಯುಕ್ತ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ್ದು, ಇಂದು, ಶನಿವಾರ (ಏ.22) ಕಾಂಗ್ರೆಸ್ಸಿಗೆ
ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ, ಶುಕ್ರವಾರ ರಾತ್ರಿ ಕಾಂಗ್ರೆಸ್‌ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದರು.
ಇಂದು ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಮ ರಮೇಶ, ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರು ರಾಣಿ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ರಾಣಿ ಸಂಯುಕ್ತಾ ಅವರ ಜತೆಗೆ ಬಿಜೆಪಿಯ 18 ಮಂದಿ ಇತರೆ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ರಾಣಿ ಸಂಯುಕ್ತ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಸದಸ್ಯೆ ರಾಣಿ ಸಂಯುಕ್ತ ಅವ ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ. ಇಂದು ಮೂರನೇ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದ್ದು, ಇದು ರಾಜ್ಯದಲ್ಲಿ ಬದದಲಾವಣೆ ಆಗಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.

ಇಂದಿನ ಪ್ರಮುಖ ಸುದ್ದಿ :-   ಸರ್ಕಾರದ ಅಚ್ಚರಿಯ ನಿರ್ಧಾರ : ಬಿಡಿಎ-ಇತರ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ​ ಐಎಎಸ್‌ ಅಧಿಕಾರಿ ನೇಮಕ...!

ರಾಣಿ ಸಂಯುಕ್ತ ಮಾತನಾಡಿ, ನಾನು ಬಿಜೆಪಿ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಬಿಜೆಪಿಯಲ್ಲಿ ನಮಗೆ ಸಾಕಷ್ಟು ನೋವಾಗಿದೆ. ಕೇವಲ ಟಿಕೆಟ್ ಹಂಚಿಕೆ ಮಾತ್ರವಲ್ಲ, ಹಲವಾರು ವಿಚಾರಗಳಿಂದ ಬಿಜೆಪಿಯಲ್ಲಿ ಹೆಚ್ಚಿನವರಿಗೆ ನೋವಾಗಿದೆ. ನನಗಿಂತ ಮುಂಚಿತವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಯಾವ ಸಿದ್ಧಾಂತದ ಮೇಲೆ ಸಾಗುತ್ತಿದೆಯೋ ಅದೇ ಸಿದ್ಧಾಂತದ ಮೇಲೆ ಸಾಗುತ್ತೇವೆ. ನಮ್ಮ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಪ್ರಯತ್ನ ಮಾಡುತ್ತೇವೆ ಎಂದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement