ಸವದತ್ತಿ ಯಲ್ಷಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಗೆ ರಿಲೀಫ್ : ನಾಮಪತ್ರ ಅಂಗೀಕಾರ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ನಾಮಪತ್ರದಲ್ಲಿ ಗೊಂದಲ ಬಗೆಹರಿದಿದೆ ಹಾಗೂ ಅವರ ನಾಮಪತ್ರ ಅಂಗೀಕಾರವಾಗಿದೆ.
ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ನಲ್ಲಿ ದೋಷ ಇದೆ ಎಂಬ ಆರೋಪ ಕೇಳಿ ಬಂದಿತ್ತು. ರತ್ನಾ ಮಾಮನಿ ಅವರು ಸಲ್ಲಿಸಿದ್ದ ಅಫಿಡವಿಟ್ ಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ ಅಭ್ಯರ್ಥಿಗಳು ತಕಕಾರು ಸಲ್ಲಿಸಿದ್ದರು. ಹೀಗಾಗಿ ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಚುನಾವಣಾಧಿಕಾರಿ ಡಾ.ರಾಜೀವ ಕೂಲೇರ್ ಅವರು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ಚುನಾವಣಾಧಿಗಳ ರತ್ನಾ ಮಾಮನಿ ಅವರು ವಿಚಾರಣೆಗೆ ಹಾಜರಾಗಿದ್ದರು.
ಈಗ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ರತ್ನಾ ಮಾಮನಿ ನಾಮಪತ್ರ ಅಂಗೀಕಾರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement