ಮೇ ಎರಡನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸಾಧ್ಯತೆ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಮಾರ್ಚ್‌ 30ರಿಂದ ಏಪ್ರಿಲ್‌ 15ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿಯಿತು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. ಮೌಲ್ಯಮಾಪನದಲ್ಲಿ 73 ಸಾವಿರಕ್ಕೂ ಹೆಚ್ಚು ಶಿಕ್ಷಕರು ಪಾಲ್ಗೊಂಡಿದ್ದಾರೆ.
ಮೌಲ್ಯಮಾಪನ ಮುಗಿದ ನಂತರ ಶೀಘ್ರ ಫಲಿತಾಂಶದ ಬಗ್ಗೆ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಟ್ವಿಸ್ಟ್​; ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ ಫೋಟೋಗಳು ವೈರಲ್‌..!

ನಿಮ್ಮ ಕಾಮೆಂಟ್ ಬರೆಯಿರಿ

advertisement