ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ ಬಿ.ವಿ. ವಿರುದ್ಧ ಕಿರುಕುಳ ಆರೋಪದ ನಂತರ ಅಸ್ಸಾಂ ಯುವ ಕಾಂಗ್ರೆಸ್ ಮುಖ್ಯಸ್ಥೆ ಅಂಕಿತಾ ದತ್ತಾ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಶನಿವಾರ ಅಸ್ಸಾಂ ರಾಜ್ಯದ ಯುವ ಕಾಂಗ್ರೆಸ್ (ಎಪಿವೈಸಿ) ಅಧ್ಯಕ್ಷೆ ಅಂಗಿತಾ ದತ್ತಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಅವರ “ಪಕ್ಷ ವಿರೋಧಿ ಚಟುವಟಿಕೆ” ಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ತಿಳಿಸಲಾಗಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್‌ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಧ್ಯಕ್ಷ ಶ್ರೀನಿವಾಸ ಬಿ.ವಿ. ಅವರು ಇತ್ತೀಚೆಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಹಾಗೂ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಶ್ರೀನಿವಾಸ್ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದಾರೆ ಮತ್ತು ತಮ್ಮ ವಿರುದ್ಧ ದೂರು ನೀಡಿದರೆ ಭೀಕರ ಪರಿಣಾಮ ೆದುರಿಸಬೇಕಾಗುತ್ತ ಬೆದರಿಕೆ ಹಾಕಿದ್ದಾರೆ ಎಂದು ಅಂಗಿತಾ ದತ್ತಾ ಆರೋಪಿಸಿದ್ದಾರೆ.
ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತಾ ದತ್ತಾ, ಕಾಂಗ್ರೆಸ್ ಅಸ್ಸಾಂ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷೆ, ಅವರ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಎಐಸಿಸಿ ಬಿಡುಗಡೆ ಮಾಡಿದ ಹೇಳಿಕೆ ಹೇಳಿಕೆ ತಿಳಿಸಿದೆ.
ಶ್ರೀನಿವಾಸ ಬಿ.ವಿ. ವಿರುದ್ಧ ಅಂಗಿಕಾ ದತ್ತಾ ಪೊಲೀಸ್ ದೂರು ದಾಖಲಿಸಿದ್ದಾರೆ. ಐವೈಸಿ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಕಳೆದ ಆರು ತಿಂಗಳಿಂದ ತನಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ದತ್ತಾ ದೂರಿನಲ್ಲಿ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಬಿವಿ ಅವರು ಮಾನನಷ್ಟ ಆರೋಪದಡಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ತನ್ನ ಎಚ್ಚರಿಕೆಗೆ ಕಿವಿಗೊಡದಿದ್ದರೆ, ಯಾವುದೇ ಪಕ್ಷದ ಸಭೆಗೆ ಅಸ್ಸಾಂನ ಗಡಿಯಿಂದ ಹೊರಗೆ ಹೋಗದಂತೆ ನೋಡಿಕೊಳ್ಳುತ್ತೇನೆ ಎಂದು ಶ್ರೀನಿವಾಸ ತನಗೆ ಬೆದರಿಕೆ ಹಾಕಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಗುವಾಹತಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಬಿ.ವಿ.ಶ್ರೀಣಿವಾಸ ಅವರು ಅಂಗಿಕಾ ದತ್ತಾ ಅವರಿಗೆ ನೋಟಿಸ್ ನೀಡಿದ್ದು, ಅವರ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸಬೇಕು, ವಿಫಲವಾದರೆ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಶ್ರೀನಿವಾಸ ಬಿ.ವಿ. ಅವರು ಹಂಚಿಕೊಂಡ ಮಾನನಷ್ಟ ನೋಟಿಸ್‌ನಲ್ಲಿ, ಅಂಗಿಕಾ ದತ್ತಾ ಆರೋಪದಲ್ಲಿ “ದುರುದ್ದೇಶಪೂರಿತ ಉದ್ದೇಶವಿದೆ” ಎಂದು ಆರೋಪಿಸಿದ್ದಾರೆ. ನೀವು ನಿರಂತರವಾಗಿ ನಿಮ್ಮ ಟ್ವಿಟ್ಟರ್ ಖಾತೆಯಿಂದ ಶ್ರೀನಿವಾಸ ಬಿ.ವಿ. ಅವರ ಬಗ್ಗೆ ಸುಳ್ಳುಗಳನ್ನು ಹೇಳುತ್ತಿದ್ದೀರಿ, ಅದರ ಬಗ್ಗೆ ಯಾವುದೇ ಪುರಾವೆಗಳಿಲ್ಲದೆ ನನ್ನ ಕಕ್ಷಿದಾರನ ಖ್ಯಾತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದೀರಿ” ಎಂದು ವಕೀಲರ ಮೂಲಕ ನೀಡಲಾದ ನೋಟಿಸ್ ಹೇಳುತ್ತದೆ.

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಅಂಗಿಕಾ ದತ್ತಾ ಅವರ ಆರೋಪಗಳನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದೆ ಮತ್ತು ಅಗತ್ಯ ಕ್ರಮಕ್ಕಾಗಿ ರಾಜ್ಯ ಪೊಲೀಸರಿಗೆ ಪತ್ರ ಬರೆದಿದೆ. ಏತನ್ಮಧ್ಯೆ, ದೂರಿಗೆ ಸಂಬಂಧಿಸಿದಂತೆ ಶುಕ್ರವಾರ ದತ್ತಾ ಅವರನ್ನು ಇಲ್ಲಿನ ಸಿಐಡಿ ಕಚೇರಿಗೆ ಕರೆಸಲಾಗಿತ್ತು.
ಅಂಗಿತಾ ದತ್ತಾ ಅಸ್ಸಾಂನ ಮಾಜಿ ಸಚಿವ ಅಂಜನ್ ದತ್ತಾ ಅವರ ಪುತ್ರಿ, ಅಂಜನ್‌ ದತ್ತಾ ರು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು. ಅಂಗಿತಾ ಕುಟುಂಬದ ನಾಲ್ಕನೇ ತಲೆಮಾರಿನ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಈ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅವರು ಅಮ್ಗುರಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement