ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

2005ರಿಂದ ವಾಸವಿದ್ದ ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ

ನವದೆಹಲಿ:  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯ ಸಂಸದರಾಗಿ ಅನರ್ಹಗೊಂಡ ನಂತರ ಗಡುವಿನ ಕೊನೆಯ ದಿನವಾದ ಇಂದು, ಶನಿವಾರ ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಳಿಗ್ಗೆಯಿಂದ ಎರಡು ಬಾರಿ ಬಂಗಲೆಗೆ ಭೇಟಿ ನೀಡಿದ್ದಾರೆ. ಬಿಜೆಪಿ ಸಂಸದ ಸಿಆರ್ ಪಾಟೀಲ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು, 2005 ರಿಂದ ಅವರು ವಾಸಿಸುತ್ತಿರುವ 12 ತುಘಲಕ್ ಲೇನ್ ಬಂಗಲೆಯನ್ನು ಏಪ್ರಿಲ್ 22 ರೊಳಗೆ ತೆರವು ಮಾಡುವಂತೆ ಅವರಿಗೆ ನೋಟಿಸ್‌ ಕಳುಹಿಸಿತ್ತು. ಪ್ರೋಟೋಕಾಲ್ ಪ್ರಕಾರ ಅವರು ನಿವಸದಿಂದ ಹೊರಹೋಗಬೇಕಾಗಿದೆ. , ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಾಜಕೀಯ ಸೇಡಿನ ಆರೋಪ ಮಾಡಿದ್ದಾರೆ. ಅನರ್ಹಗೊಂಡ ಸಂಸದರು ಸರ್ಕಾರಿ ವಸತಿಗೆ ಅರ್ಹರಲ್ಲ ಮತ್ತು ಅವರ ಅಧಿಕೃತ ನಿವಾಸವನ್ನು ಖಾಲಿ ಮಾಡಲು ಒಂದು ತಿಂಗಳ ಅವಧಿ ಪಡೆಯುತ್ತಾರೆ.
2005 ರಿಂದ ರಾಹುಲ್ ಗಾಂಧಿ 12 ತುಘಲಕ್ ಲೇನ್ ಬಂಗಲೆಯಲ್ಲಿ ವಾಸಿಸುತ್ತಿದ್ದರು. ಇಂದು, ಶನಿವಾರ ಮಧ್ಯಾಹ್ನದ ವೇಳೆಗೆ ರಾಹುಲ್ ಗಾಂಧಿ ಕೀಗಳನ್ನು ಹಸ್ತಾಂತರಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ (Sonia Gandhi) ಅವರ ಜನಪಥ್ ನಿವಾಸಕ್ಕೆ ತೆರಳುತ್ತಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಾಜಕೀಯ ಸೇಡಿನ ಆರೋಪ ಮಾಡಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಮನೆಯನ್ನು ಖಾಲಿಗೊಳಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ತುಘಲಕ್ ಲೇನ್‍ನ ಬಂಗಲೆ ಹೊರಗೆ 2 ಟ್ರಕ್‍ಗಳಲ್ಲಿ ಕಾರ್ಮಿಕರು ಮನೆಯಲ್ಲಿದ್ದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ.
ಮೇಲ್ಮನವಿ ಸಲ್ಲಿಸಲು ಗುಜರಾತ್ ನ್ಯಾಯಾಲಯ 30 ದಿನಗಳ ಕಾಲಾವಕಾಶ ನೀಡಿತ್ತು, ಅದನ್ನು ಅವರು ಶುಕ್ರವಾರ ಮೇಲ್ಮನವಿಯಲ್ಲಿ ಮೇಲಿನ ಕೋರ್ಟ್‌ ವಜಾ ಮಾಡಿದೆ. ಭಾರತೀಯ ಜನತಾ ಪಕ್ಷವು (ಬಿಜೆಪಿ) ಕೆಳ ನ್ಯಾಯಾಲಯದ ಶಿಕ್ಷೆಯನ್ನು ಎತ್ತಿಹಿಡಿಯುವ ಮೇಲ್ಮನವಿ ನ್ಯಾಯಾಲಯದ ತೀರ್ಪನ್ನು “ಗಾಂಧಿ ಕುಟುಂಬಕ್ಕೆ ಕಪಾಳಮೋಕ್ಷ” ಎಂದು ಕರೆದಿದೆ ಮತ್ತು ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದು ನ್ಯಾಯಾಲಯವು ಸಾಬೀತುಪಡಿಸಿದೆ ಮತ್ತು “ಯಾವುದೇ ಕುಟುಂಬಕ್ಕೆ ಆದ್ಯತೆ ನೀಡಲಾಗುವುದಿಲ್ಲ” ಎಂದು ಹೇಳಿದೆ.
ವಯನಾಡಿನ ಮಾಜಿ ಸಂಸದ ರಾಹುಲ್‌ ಗಾಂಧಿ ತಮ್ಮ ಲೋಕಸಭಾ ಸದಸ್ಯತ್ವವನ್ನು ಉಳಿಸಿಕೊಳ್ಳಲು ಸೂರತ್ ನ್ಯಾಯಾಲಯದ ಆದೇಶದ ವಿರುದ್ಧ ಈಗ ಗುಜರಾತ್ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ.

ಪ್ರಮುಖ ಸುದ್ದಿ :-   ವೀಡಿಯೊ | ಪೊಲೀಸರ "ನಿಷ್ಕ್ರಿಯತೆ"ಗೆ ಹತಾಶೆಗೊಂಡು ಠಾಣೆಗೆ ಬಂದು ಪೊಲೀಸ್ ಅಧಿಕಾರಿಗೆ 'ಆರತಿ' ಮಾಡಿದ ದಂಪತಿ..!. ಆದರೆ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement