ರಾಜ್ಯದಲ್ಲಿ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸಾಂಕ್ರಾಮಿಕ (Covid-19) ರೋಗ ರಾಜ್ಯದಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದೆ.
ರಾಜ್ಯದಲ್ಲಿ ಒಟ್ಟು 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಧನಾತ್ಮಕ ಪ್ರಮಾಣ ಪ್ರಮಾಣ 3.52ರಷ್ಟಿದೆ. ದೈನಂದಿನ ಧನಾತ್ಮಕ ಪ್ರಮಾಣ ಶೇ 3.06 ರಷ್ಟಿದೆ. ಕೊರೊನಾದಿಂದ ರಾಜ್ಯದಲ್ಲಿ ಕಳೆದ 15 ದಿನದಲ್ಲಿ 15 ಜನರು ಮೃತಪಟ್ಟಿದ್ದಾರೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12 ಸಾವಿರಕ್ಕೂ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 42 ಮಂದಿ‌ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಎಂಟು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ…
ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಈ ನಡುವೆ ಶುಕ್ರವಾರ, ಕೇಂದ್ರ ಸರ್ಕಾರವು ಈ ಎಂಟು ರಾಜ್ಯಗಳಿಗೆ ಪತ್ರ ಬರೆದಿದೆ ಮತ್ತು ಕೊರೊನಾವನ್ನು ಸೂಕ್ಷ್ಮವಾಗಿ ಗಮನಿಸಲು ಸೂಚನೆ ನೀಡಿದೆ.
ದೆಹಲಿ, ಉತ್ತರ ಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕ, ಹರಿಯಾಣ, ರಾಜಸ್ಥಾನ ಮತ್ತು ಮಹಾರಾಷ್ಟ್ರ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಶುಕ್ರವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ ಭೂಷಣ ಈ ರಾಜ್ಯಗಳಿಗೆ ಪತ್ರ ಬರೆದಿದ್ದು, ಕೊರೊನಾ ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ ಎಂದು ಎಚ್ಚರಿಸಿದ್ದಾರೆ. ಕೋವಿಡ್ -19 ರ ಪ್ರಸ್ತುತ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವಂತೆ ಅವರು ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಮತ್ತು ಸಾವಿನ ಸಂಖ್ಯೆ ಇನ್ನೂ ಕಡಿಮೆ ಇದೆ, ಆದರೆ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ರಾಜ್ಯಗಳು ಮತ್ತು ಅವುಗಳ ಜಿಲ್ಲೆಗಳ ಬಗ್ಗೆ ಗಮನ ಹರಿಸುವ ಅವಶ್ಯಕತೆಯಿದೆ ಇದು ಪ್ರಕರಣಗಳ ಹೆಚ್ಚಳವು ಸ್ಥಳೀಯ ಹರಡುವಿಕೆಯ ಸೂಚನೆಯಾಗಿರಬಹುದು ಎಂದು ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement