ಕನ್ನಡ ಧಾರಾವಾಹಿಯ ಜನಪ್ರಿಯ ನಟ ಸಂಪತ್​ ಜಯರಾಮ ಆತ್ಮಹತ್ಯೆ …!

ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದ ನಟ ಸಂಪತ್ ಜಯರಾಮ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಅವರಿಗೆ 35 ವರ್ಷ ವಯಸ್ಸಾಗಿತ್ತು. ಶನಿವಾರ (ಏಪ್ರಿಲ್‌ 22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲದ ಅರಿಶಿನಕುಂಟೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ನೇಣುಬಿಗಿದುಕೊಂಡು ನಟ ಆತ್ಮಹತ್ಯೆ ಮಾಡಿಕೊಂಡಿದ್ದುಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆದರೆ ನಟನೆಯ ಕನಸು ಹೊತ್ತಿದ್ದ ಸಂಪತ್ ಜಯರಾಮ ಅವರು ಇತ್ತೀಚೆಗೆ ಅವಕಾಶಗಳು ಇಲ್ಲದೆ ವಿಚಲಿತರಾಗಿದ್ದರು ಎನ್ನಲಾಗಿದೆ. ನಿನ್ನೆ (ಏಪ್ರಿಲ್ 22)ರಂದು ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದು ಚಿತ್ರರಂಗದ ಸ್ನೇಹಿತರು ಕಂಬನಿ ಮಿಡಿಯುತ್ತಿದ್ದಾರೆ. ಸಂಪತ್ ಜಯರಾಮ್ ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಆಗಿದ್ದ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ಯಲ್ಲಿ ನಟಿಸಿದ್ದರು. ನಟ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ವೈಷ್ಣವಿ ಅವರ ಅಣ್ಣ ಆಗಿ ನಟಿಸುತ್ತಿದ್ದರು. ಸೀರಿಯಲ್ ಆರಂಭದಲ್ಲಿ ಇವರ ಪಾತ್ರ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು 35 ವರ್ಷದ ಸಂಪತ್ ಅವರು ಒಂದು ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಟ ದಿಢೀರನೇ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರನ್ನು ಹಾಗೂ ಆಪ್ತರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಮೃತದೇಹವನ್ನು ಅವರ ಊರಾದ ಎನ್‌ಆರ್‌ಪುರಕ್ಕೆ ಒಯ್ಯಲಾಗುತ್ತದೆ ಎಂದು ಹೇಳಲಾಗಿದೆ. ಇಷ್ಟು ಚಿಕ್ಕ ವಯಸ್ಸಿಗೆ ಇಂತಹ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದೇಕೆ ಎಂದು ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

ಪ್ರಮುಖ ಸುದ್ದಿ :-   ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ, ಸಿ.ಕೆ. ನಾಣು ಉಚ್ಚಾಟನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement