ಕರ್ನಾಟಕ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

ಬೀದರ: ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿದ ಘಟನೆ ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ಯುವಕನನ್ನು ಹೈದರಾಬಾದ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಗಣೇಶ ಶಾಲಿವಾನ ಯರಬಾಗೆ (23) ಎಂಬ ಯುವಕ ಭಾಲ್ಕಿ ಪಟ್ಟಣದ ಇಶಾನ್ ಕಾಲೋನಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾಗ ಸಂಜೆ 6 ಗಂಟೆ ಸುಮಾರಿಗೆ ಮೂವರು ಯುವಕರು ಆತನ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ ಸಾರ್ವಜನಿಕರು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಗಣೇಶ ಅವರ ಮೇಲೆ ಹಲ್ಲೆ ನಡೆಸಿ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಆರೋಪಿಗಳ ಗುರುತು ಪತ್ತೆಯಾಗಿದೆ. ಈ ಸಂಬಂಧ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಗೆ ಶಾಸಕ ಈಶ್ವರ ಖಂಡ್ರೆ ಭೇಟಿ..
ವಿಷಯ ತಿಳಿದ ತಕ್ಷಣ ಶಾಸಕ ಈಶ್ವರ ಖಂಡ್ರೆ ಭಾಲ್ಕಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ತಮ್ಮ ಪಕ್ಷದ ಕಾರ್ಯಕರ್ತನ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸೋಲಿನ ಭಯದಿಂದ ಬಿಜೆಪಿಯವರು ಈ ರೀತಿ ಗುಂಡಾವರ್ತನೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಕೂಡಲೇ ಪೊಲೀಸ್ ಇಲಾಖೆಯು ತನಿಖೆ ನಡೆಸಿ, ತಪ್ಪಿಸ್ಥರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement