ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ರಾತ್ರಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.
ಚುನಾವಣೆ ಹಿನ್ನೆಲೆ ಅವರು ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದಾರೆ. ನಿರಂತರ ಕಾರ್ಯಕ್ರಮಗಳ ಒತ್ತಡದಿಂದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜ್ವರ ಬಂದಿದೆ. ಹೀಗಾಗಿ, ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜೆಡಿಎಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಭಾನುವಾರದಿಂದ ಮೇ 8ರವರೆಗೆ ನಿರಂತರವಾಗಿ ಜೆಡಿಎಸ್ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದರು. ಆದರೆ, ನಿರಂತರ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಆಯಾಸಗೊಂಡಿದ್ದ ಕುಮಾರಸ್ವಾಮಿ ಶನಿವಾರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ನಂತರ ಸಂಜೆ ಬಳಿಕ ಜ್ವರದ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆ ದಾಖಲಾಗಿದ್ದಾರೆ. ಹೀಗಾಗಿ, ಭಾನುವಾರದಿಂದ ನಡೆಯಬೇಕಿದ್ದ ಪ್ರಚಾರ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ