ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿ ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.
ಇಷ್ಟು ದಿನ ವಿದೇಶದಲ್ಲಿ ನೆಲೆಸಿದ್ದ ಜಫರ್ ಅಲಿ ಅವರು ಇತ್ತಿಚಿಗಷ್ಟೇ ಬೆಂಗಳೂರಿಗೆ ಹಿಂತಿರುಗಿದ್ದರು. ಜಫರ್ ಅಲಿ ಅವರ ಹೆಸರು ಯಾವ ಕ್ಷೇತ್ರದ ಮತದಾರರ ಪಟ್ಟಿಯಲ್ಲೂ ಇಲ್ಲ. ಹೀಗಾಗಿ ಆದ್ದರಿಂದ ಚುನಾವಣಾ ಆಯೋಗವು ಅವರ ನಾಮಪತ್ರವನ್ನು ತಿರಸ್ಕರಿಸಿದೆ ಎಂದು ಹೇಳಲಾಗಿದೆ. ಜಫರ್ ಅಲಿ ಏಪ್ರಿಲ್ 20 ರಂದು ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಲು ವಿಳಂಬವಾದ ಕಾರಣ ಅವರ ವೋಟರ್ ಐಡಿ ಮನವಿ ತಿರಸ್ಕರಿಸಲಾಗಿದೆ. ಹೀಗಾಗಿ ಅವರ ನಾಂಪತ್ರ ತಿರಸ್ಕೃತಗೊಳ್ಳಲು ಕಾರಣ ಎನ್ನಲಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಕಣದಲ್ಲಿದ್ದು, ಬಿಜೆಪಿಯಿಂದ ಎನ್.ಚಂದ್ರ ಅವರು ಕಣದಲ್ಲಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ