ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ : ದೆಹಲಿ ಜಂತರ್ ಮಂತರ್‌ ಫುಟ್‌ಪಾತ್‌ನಲ್ಲೇ ಮಲಗಿ ರಾತ್ರಿ ಕಳೆದ ಅಗ್ರಮಾನ್ಯ ಕುಸ್ತಿಪಟುಗಳು

ನವದೆಹಲಿ: ಭಾರತದ ಅಗ್ರಮಾನ್ಯ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಸೇರಿದಂತೆ ಹಲವು ಕುಸ್ತಿಪಟುಗಳು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕುಸ್ತಿಪಟುಗಳು ಇಡೀ ರಾತ್ರಿ ನವದೆಹಲಿಯ ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾ ಸ್ಥಳದ ಫುಟ್‌ಪಾತ್‌ನಲ್ಲಿ ಮಲಗಿದ್ದರು.
ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ದೂರು ದಾಖಲಿಸಿದ ನಂತರ ಕುಸ್ತಿಪಟುಗಳು ಮತ್ತೊಮ್ಮೆ ತಮ್ಮ ಪ್ರತಿಭಟನೆ ಪುನರಾರಂಭಿಸಬೇಕಾಯಿತು. ಏಳು ಮಹಿಳಾ ಕುಸ್ತಿಪಟುಗಳಿಂದ ದೂರು ದಾಖಲಾಗಿದೆ, ಆದರೆ ಈ ಪ್ರಕರಣದಲ್ಲಿ ಪ್ರಥಮ ಮಾಹಿತಿ ವರದಿ(ಎಫ್‌ಐಆರ್‌)ಯನ್ನು ಇನ್ನೂ ದಾಖಲಿಸಲಾಗಿಲ್ಲ. ಕುಸ್ತಿಪಟುಗಳು ಡಬ್ಲ್ಯುಎಫ್‌ಐ(WFI) ಅಧ್ಯಕ್ಷರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳವ ವರೆಗೂ ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಕೂಡ ಈ ವಿಷಯದ ಬಗ್ಗೆ ಗಮನ ಸೆಳೆದಿದ್ದಾರೆ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಸಹ ನೀಡಿದ್ದಾರೆ ಮತ್ತು ಏಳು ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ದೂರಿನ ವಿರುದ್ಧ ಈಗ ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ವಿಷಯವು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಗಮನಕ್ಕೆ ಬಂದ ನಂತರ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದರು ಮತ್ತು ಈ ವರ್ಷದ ಜನವರಿಯಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಕುಸ್ತಿಪಟುಗಳನ್ನು ಮಾತುಕತೆಗೆ ಕರೆದರು.
ಖ್ಯಾತ ಬಾಕ್ಸರ್ ಎಂ.ಸಿ. ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ಸಹ ಕ್ರೀಡಾ ಸಚಿವಾಲಯ ರಚಿಸಿದೆ ಮತ್ತು ಒಂದು ತಿಂಗಳೊಳಗೆ ವರದಿಯನ್ನು ಸಲ್ಲಿಸುವಂತೆ ಹೇಳಿದೆ. ನಂತರ ಗಡುವನ್ನು ಎರಡು ವಾರಗಳವರೆಗೆ ವಿಸ್ತರಿಸಲಾಯಿತು ಮತ್ತು ಬಬಿತಾ ಫೋಗಟ್ ಅವರನ್ನು ಆರನೇ ಸದಸ್ಯರನ್ನಾಗಿ ಸೇರಿಸಲಾಯಿತು.

ಪ್ರಮುಖ ಸುದ್ದಿ :-   ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement