ದಕ್ಷಿಣ ಆಫ್ರಿಕಾದಿಂದ ಕುನೊ ರಾಷ್ಟ್ರೀಯ ಉದ್ಯಾನವಕ್ಕೆ ತಂದಿದ್ದ ಗಂಡು ಚಿರತೆ ಸಾವು

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತರಲಾದ ಮತ್ತೊಂದು ಚಿರತೆ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮೃತಪಟ್ಟಿದೆ.
ಮಧ್ಯಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ ಅವರು ಚಿರತೆಯ ಸಾವನ್ನು ದೃಢಪಡಿಸಿದ್ದು, ಉದಯ್ ಎಂಬ ಗಂಡು ಚಿರತೆ ಚಿಕಿತ್ಸೆ ವೇಳೆ ಮೃತಪಟ್ಟಿದೆ ಎಂದು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಕರೆತರಲಾದ ಉದಯ್ ಎಂಬ ಇನ್ನೊಂದು ಚಿರತೆಯು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಅನಾರೋಗ್ಯದಿಂದ ಬಳಲುತ್ತಿತ್ತು. ಅಉ ಚಿಕಿತ್ಸೆ ವೇಳೆ ಮೃತಪಟ್ಟಿದೆ. ಸಾವಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಭಾನುವಾರ ಬೆಳಗ್ಗೆ ಚಿರತೆ ಅಸ್ವಸ್ಥವಾಗಿರುವುದನ್ನು ಅರಣ್ಯ ತಂಡ ಗಮನಿಸಿದೆ. ನಂತರ, ಪ್ರಾಣಿಯನ್ನು ಶಾಂತಗೊಳಿಸಿ ವೈದ್ಯಕೀಯ ಕೇಂದ್ರಕ್ಕೆ ತರಲಾಯಿತು. ಚಿಕಿತ್ಸೆ ವೇಳೆ ಸಂಜೆ 4 ಗಂಟೆ ಸುಮಾರಿಗೆ ಚಿರತೆ ಮೃತಪಟ್ಟಿದೆ. ಪಶುವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯನ್ನು ವೀಡಿಯೊ ಮತ್ತು ಛಾಯಾಗ್ರಹಣ ಮಾಡಲಾಗುತ್ತದೆ.
ಈ ವರ್ಷ ಫೆಬ್ರವರಿ 18 ರಂದು ಇತರ 11 ಚಿರತೆಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೊಗೆ ಕರೆತರಲಾಯಿತು. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇದು ಎರಡನೇ ಚಿರತೆ ಸಾವಾಗಿದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಇಪ್ಪತ್ತು ಚಿರತೆಗಳನ್ನು ತರಲಾಯಿತು. ಕಳೆದ ವರ್ಷ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾದ ಎಂಟು ಚಿರತೆಗಳಲ್ಲಿ ಒಂದಾದ ಸಾಶಾ ಮಾರ್ಚ್‌ನಲ್ಲಿ ಮೃತಪಟ್ಟಿತ್ತು. ಭಾನುವಾರ ಎರಡನೇ ಚಿರತೆಯ ಸಾವಿನೊಂದಿಗೆ, ಈಗ ಚಿರತೆಗಳ ಸಂಖ್ಯೆ 18 ಕ್ಕೆ ಇಳಿದಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement