ಪಕ್ಷದ ಅಭ್ಯರ್ಥಿಯಿದ್ರೂ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಜೆಡಿಎಸ್‌ ಮುಖಂಡ ಭೋಜೇಗೌಡ…!

posted in: ರಾಜ್ಯ | 0

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಪ್ತ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂಬುದೀಗ ಚರ್ಚೆಗೆ ಗ್ರಾಸವಾಗಿದೆ.
ಆ ಮೂಲಕ ತಮ್ಮದೇ ಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ. ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಅವರಿಗೆ ಮತ ಹಾಕುವಂತೆ ಸಭೆಯೊಂದರಲ್ಲಿ ಮನವಿ ಮಾಡಿದ್ದಾರೆ.
ಭೋಜೇಗೌಡ ಅವರು ತಮ್ಮ ನಿವಾಸದಲ್ಲಿ ಬೆಂಬಲಿಗರೊಂದಿಗೆ ಮಾತನಾಡುತ್ತಿರುವ ವೈರಲ್‌ ವೀಡಿಯೊದಲ್ಲಿ ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದರೂ ಭೊಜೇಗೌಡ ಕಾಂಗ್ರೆಸ್ ಗೆ ಬೆಂಬಲಿಸುವಂತೆ ಸೂಚಿಸಿದ್ದಾರೆ. ನೀವೆಲ್ಲಾ ಸೇರಿ ಕಾಂಗ್ರೆಸ್ ಗೆ ವೋಟ್ ಹಾಕಬೇಕು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು. ಮೊದಲು ವೋಟ್ ಹಾಕಿ ಗೆಲ್ಲಿಸಿ, ಮಿಕ್ಕಿದ್ದು ಅಮೇಲೆ ನೋಡಿಕೊಳ್ಳೋಣ ಎಂದು ಬೋಜೇಗೌಡ ಹೇಳಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.
ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದಾರೆ. ಆದರೂ ಭೊಜೇಗೌಡ ಅವರು ಕಾಂಗ್ರೆಸ್ ಗೆ ಬೆಂಬಲ ನೀಡಲು ಹೇಳುತ್ತಿರುವುದು ಜೆಡಿಎಸ್‌ನವರಿಗೆ ಶಾಕ್‌ ತಂದಿದೆ. ಎಸ್.ಎಲ್.ಭೋಜೇಗೌಡ ಅವರು ಎಚ್.ಡಿ‌ ಕುಮಾರಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕ ಸಿ.ಟಿ.ರವಿ ಸೋಲಿಸಲು ಕಾಂಗ್ರೆಸ್- ಜೆಡಿಎಸ್ ಒಂದಾಗಿದ್ದಾರೆ ಎಂಬ ಆರೋಪದ ಮಧ್ಯೆ ಈ ವೀಡಿಯೊ ಹೊರಬಿದ್ದಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement