
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ. ಜ್ವರದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರ ಸಲಹೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ.
ಒಂದೆರಡು ತಿಂಗಳಿನಿಂದ ಪಂಚರತ್ನ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ವಿಶ್ರಾಂತಿ ಇಲ್ಲದೆ ಚುನಾವಣಾ ಪ್ರವಾಸ ಮಾಡಿದ್ದರಿಂದ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಡಸ್ಟ್ ಅಲರ್ಜಿ ಕೂಡ ಇದೆ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ಕುಮಾರಸ್ವಾಮಿ ಅವರನ್ನು ಸ್ಪೆಷಲ್ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.



ನಿಮ್ಮ ಕಾಮೆಂಟ್ ಬರೆಯಿರಿ