ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ ನಿಧನ

ಬೆಳಗಾವಿ : ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ (74) ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರಾದ ಇನಾಂದಾರ್‌ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. ದಾನಪ್ಪಗೌಡ ಬಸವನಗೌಡ ಇನಾಮಾದಾರ್ ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಚಿವರಾಗಿ ಕೆಲಸ ಮಾಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಆಕಾಂಕ್ಷಿಯಾಗಿದ್ದ ಅವರಿಗೆ ಅನಾರೋಗ್ಯದ ಕಾರಣ ಅವರಿಗೆ ಟಿಕೆಟ್ ನೀಡಿರಲಿಲ್ಲ.
ಮಾರ್ಚ್‌ 3 ರಂದು ಕಿತ್ತೂರು ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದ ಅವರು ಕೆಲದಿನಗಳ ನಂತರ ಉಸಿರಾಟ ತೊಂದರೆ ಕಾಣಿಕೊಂಡಿದ್ದರಿಂದ ಮಾರ್ಚ್‌ 8 ರಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

2018ರ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 40,293 ಮತಗಳನ್ನು ಪಡೆದು ಬಿಜೆಪಿಯ ದಾನಪ್ಪ ಗೌಡ ಬಸನಗೌಡ ಇನಾಮದಾರ ವಿರುದ್ಧ ಸೋಲು ಕಂಡಿದ್ದರು.
ಅವರು ಎರಡು ಜನತಾ ಪಕ್ಷದಿಂದ ಎರಡು ಮತ್ತು ಮೂರು ಸಲ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಡಿ. ಬಿ. ಇನಾಮಾದಾರ್‌ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಕಣಕ್ಕಿಳಿದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1985ರಲ್ಲಿಯೂ ಮತ್ತೆ ಜನತಾ ಪಕ್ಷದಿಂದ ಆಯ್ಕೆಯಾದರು. 1994ರಲ್ಲಿ ಕಾಂಗ್ರೆಸ್ ಸೇರಿದ ಅವರು 1994, 1999 ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದರು. ದೇವರಾಜ ಅರಸ್, ಎಸ್. ಎಂ. ಕೃಷ್ಣ ಮತ್ತು ಎಸ್. ಬಂಗಾರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು.
2018ರ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅವರು ಬಿಜೆಪಿಯ ದಾನಪ್ಪ ಗೌಡ ಬಸನಗೌಡ ಇನಾಮದಾರ ವಿರುದ್ಧ ಸೋತಿದ್ದರು.

ಪ್ರಮುಖ ಸುದ್ದಿ :-   ಭಗವದ್ಗೀತೆಯ ಪ್ರಧಾನ ವಿಷಯವೇ ಮೈಂಡ್ ಮ್ಯಾನೇಜ್ಮೆಂಟ್ : ಸ್ವರ್ಣವಲ್ಲೀ ಶ್ರೀಗಳು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement